ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪ್ರಧಾನಿ ಗದ್ದುಗೆಯಿಂದ ಇಳಿದಾಗ ಸಿಹಿ ಹಂಚಿ ಸಂಭ್ರಮಿಸಿದ್ದರು! (Deve gowda | JDS | Prime Minister | 77th kannda sahithya sammelana)
'ನಾನು ಪ್ರಧಾನಿ ಗದ್ದುಗೆಯಿಂದ ಕೆಳಗಿಳಿದ ದಿನವೇ ಉದ್ಯಾನನಗರಿಯಲ್ಲಿ ಕೆಲವರು ಸಿಹಿ ಹಂಚಿ ಸಂಭ್ರಮಿಸಿದ್ದರು. ಒಬ್ಬ ಕನ್ನಡಿಗ ಪ್ರಧಾನಿಯಾಗಿದ್ದಾಗಲೇ ಈ ಘಟನೆ ನಡೆಯಿತು' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಮ್ಮ ನೋವನ್ನು ಹೊರಹಾಕಿದ ಘಟನೆ 77ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆಯಿತು.

ಅವರು 77ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ಭಾನುವಾರ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ವೇದಿಕೆಯಲ್ಲಿ ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸಿದವರಿಗೆ ಸನ್ಮಾನ ನೆರವೇರಿಸಿ ಮಾತನಾಡಿದರು.

ಈ ಕಾರಣದಿಂದಲೇ ಕನ್ನಡಿಗನಾಗಿ ಹುಟ್ಟಿ ತಪ್ಪು ಮಾಡಿದೆ ಎಂದಿದ್ದೆ. ಅದನ್ನು ಹಲವರು ವಿರೋಧಿಸಿದರು. ಆದರೆ ನಾನು ಏಕೆ ಹಾಗೆ ಹೇಳಿದೆ ಎಂಬುದನ್ನು ಸಮರ್ಥಿಸಿ ಡಾ.ಯು.ಆರ್.ಅನಂತಮೂರ್ತಿ ಅವರು ಲೇಖನ ಬರೆದರು.

ನಾನು ಕನ್ನಡಿಗನೆಂದು ಹೇಳಿಕೊಳ್ಳುವುದಕ್ಕೆ ನನಗೆ ಹೆಮ್ಮೆ ಎನಿಸುತ್ತದೆ ಎಂದರು. ಈ ನಾಡಿನಲ್ಲಿ ಅಸಹ್ಯಕರ ಬೆಳವಣಿಗೆಗಳು ನಡೆಯುತ್ತಿರುವುದರಿಂದ ಇತ್ತೀಚೆಗೆ ದೃಶ್ಯ ಮಾಧ್ಯಮವನ್ನು ನೋಡುವುದೇ ಇಲ್ಲ. ಇದ್ದದ್ದು ಇದ್ದಂತೆ ಹೇಳಿದರೆ ಕೆಲವರಿಗೆ ಕೋಪ ಬರುತ್ತದೆ ಎಂದು ಯಾರ ಹೆಸರನ್ನೂ ಹೇಳದೇ ಟೀಕಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಹೊರತರುತ್ತಿರುವ ಶಿವಪುರಾಣ ರಹಸ್ಯ ಪುಸ್ತಕದ ಸಾವಿರ ಪ್ರತಿಗಳ ಮುದ್ರಣಕ್ಕೆ ತಗಲುವ ವೆಚ್ಚವನ್ನು ನಾನೇ ಭರಿಸುತ್ತೇನೆ ಎಂದು ನಲ್ಲೂರು ಪ್ರಸಾದ್ ಅವರಿಗೆ ಭರವಸೆ ನೀಡಿರುವುದಾಗಿ ಈ ಸಂದರ್ಭದಲ್ಲಿ ಹೇಳಿದರು.
ಇವನ್ನೂ ಓದಿ