ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಐವರು ಪಕ್ಷೇತರರ ಅನರ್ಹತೆ ಸರಿ: ಹೈಕೋರ್ಟ್ ತೀರ್ಪು (High court | Indipendent MLA | BJP | Congress | Yeddyurappa)
ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಐವರು ಪಕ್ಷೇತರ ಅನರ್ಹ ಶಾಸಕರ ಕುರಿತು ಹೈಕೋರ್ಟ್ ಪೀಠ ಸೋಮವಾರ ಅಂತಿಮ ತೀರ್ಪು ಪ್ರಕಟಿಸಿದ್ದು, ಐವರು ಪಕ್ಷೇತರ ಶಾಸಕರ ಅನರ್ಹತೆ ಸರಿ ಎಂದು ಮಹತ್ವದ ಆದೇಶ ನೀಡುವ ಮೂಲಕ ಪಕ್ಷೇತರ ಶಾಸಕರ ಭವಿಷ್ಯ ಡೋಲಾಯಮಾನವಾದಂತಾಗಿದೆ.

ಐವರು ಪಕ್ಷೇತರ ಶಾಸಕರ ಅನರ್ಹತೆ ಕುರಿತು ಸ್ಪೀಕರ್ ಕೆ.ಜಿ.ಬೋಪಯ್ಯ ಅವರ ಕ್ರಮವನ್ನು ಹೈಕೋರ್ಟ್ ಪೂರ್ಣ ಪೀಠ ಎತ್ತಿಹಿಡಿಯುವ ಮೂಲಕ ಮೂವರು ನ್ಯಾಯಾಧೀಶರು ಒಮ್ಮತದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪಕ್ಷೇತರ ಶಾಸಕರ ಅನರ್ಹತೆ ಕ್ರಮ ಸರಿ ಎಂದು ಕೋರ್ಟ್ ಹೇಳಿದೆ. ಆ ನಿಟ್ಟಿನಲ್ಲಿ ಆಡಳಿತಾರೂಢ ಬಿಜೆಪಿ ಸರಕಾರ ಮತ್ತೊಂದು ಕಂಟಕದಲ್ಲಿ ಗೆಲುವು ಸಾಧಿಸಿದಂತಾಗಿದೆ.

ಇದು ಜನತಾ ಜನಾರ್ದನನ ಗೆಲುವು-ಸಿಎಂ ಹೇಳಿಕೆ: ಹೈಕೋರ್ಟ್ ತೀರ್ಪು ಸ್ವಾಗತಾರ್ಹ. ಇದು ಜನತಾ ಜನಾರ್ದನನ ಗೆಲುವು. ಜನತಾ ಜನಾರ್ದನರ ತೀರ್ಪು ವಿರೋಧಿಸಿದರೆ ಕೋರ್ಟ್ ಕೂಡ ಪುರಸ್ಕರಿಸಲ್ಲ ಎಂಬುದು ಐವರು ಪಕ್ಷೇತರರ ವಿರುದ್ಧ ಹೈಕೋರ್ಟ್ ನೀಡಿರುವ ಅಂತಿಮ ತೀರ್ಪು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಕ್ಷೇತರರ ಅನರ್ಹತೆಯನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದರಿಂದ ಪಕ್ಷಾಂತರ ನಿಷೇಘಧ ಕಾಯ್ದೆಗೆ ಶಕ್ತಿ ಬಂದಂತಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತೇವೆ-ಪಕ್ಷೇತರ ಶಾಸಕರು:
ಅನರ್ಹತೆ ಪ್ರಕರಣದ ಕುರಿತು ಹೈಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿದ್ದು, ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಪಕ್ಷೇತರ ಶಾಸಕರು ಸೇರಿದ್ದಾರೆ. ಪ್ರಕರಣದ ಕುರಿತು ಹೈಕೋರ್ಟ್ ಸ್ಪೀಕರ್ ಕ್ರಮ ಸರಿ ಎಂದು ತೀರ್ಪು ಪ್ರಕಟಿಸಿದ ನಂತರ, ನರೇಂದ್ರಸ್ವಾಮಿ ಅವರ ಮನೆಯಲ್ಲಿ ಸಭೆ ನಡೆಸಿದ ನಂತರ ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಪಕ್ಷೇತರರ ಸ್ಥಿತಿ ಏನಾಗಲಿದೆ?
ಇದೀಗ ಪಕ್ಷೇತರ ಶಾಸಕರ ಅನರ್ಹತೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹಾಗಾಗಿ ಅವರು ಮುಂದಿನ ಆರು ವರ್ಷಗಳ ಕಾಲ ವಿಧಾನಸಭೆಗೆ ಸ್ಪರ್ಧಿಸುವಂತಿಲ್ಲ. ಅಷ್ಟೇ ಅಲ್ಲ, ಯಾವುದೇ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇರುವುದಿಲ್ಲ. ಕೊನೆಯ ಅವಕಾಶ ಎಂಬಂತೆ ಪಕ್ಷೇತರರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಬಹುದಾಗಿದೆ.

ಪಕ್ಷೇತರ ಶಾಸಕರಾದ ಗೂಳಿಹಟ್ಟಿ ಶೇಖರ್, ಶಿವರಾಜ್ ತಂಗಡಗಿ, ಪಿ.ಎಂ.ನರೇಂದ್ರ ಸ್ವಾಮಿ, ವೆಂಕಟರಮಣಪ್ಪ ಮತ್ತು ಡಿ.ಸುಧಾಕರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾ.ಮೋಹನ ಶಾಂತನಗೌಡರ್, ನ್ಯಾ.ಅಬ್ದುಲ್ ನಜೀರ್ ಮತ್ತು ನ್ಯಾ.ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ಪೀಠ ಫೆ.1ರಂದು ಕಾಯ್ದಿರಿಸಿದ್ದ ತೀರ್ಪನ್ನು ಸೋಮವಾರ ಸಂಜೆ ಪ್ರಕಟಿಸುವುದಾಗಿ ಹೈಕೋರ್ಟ್ ಪೀಠ ತಿಳಿಸಿತ್ತು.
ಇವನ್ನೂ ಓದಿ