ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲಾಭದಾಯಕ ಹುದ್ದೆ: ರೆಡ್ಡಿ ಬ್ರದರ್ಸ್‌ಗೆ ಚುನಾವಣಾ ಆಯೋಗದ ನೋಟಿಸ್ (Janardana Reddy | Election commission | High court | Ugrappa)
ಲಾಭದಾಯಕ ಹುದ್ದೆ ಹೊಂದಿರುವ ಆರೋಪದ ಮೇಲೆ ಕೇಂದ್ರ ಚುನಾವಣಾ ಆಯೋಗವು ಬಳ್ಳಾರಿಯ ಸಚಿವತ್ರಯರಿಗೆ ನೋಟಿಸ್ ಜಾರಿ ಮಾಡಿ ಮಾರ್ಚ್ 11ರಂದು ಆಯೋಗದ ಮುಂದೆ ಹಾಜರಾಗುವಂತೆ ಸೂಚಿಸಿದೆ.

ಲಾಭದಾಯಕ ಹುದ್ದೆ ಹೊಂದಿರುವ ಆರೋಪದ ಮೇಲೆ ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನು ಸಚಿವ ಸ್ಥಾನದಿಂದ ವಜಾಗೋಳಿಸಬೇಕೆಂದು ಕಾಂಗ್ರೆಸ್ ನಾಯಕರಾದ ಕೆ.ಸಿ.ಕೊಂಡಯ್ಯ ಮತ್ತು ಉಗ್ರಪ್ಪ ರಾಜ್ಯಪಾಲರಿಗೆ ದೂರು ಕೊಟ್ಟಿದ್ದರು. ಆ ದೂರನ್ನು ರಾಜ್ಯಪಾಲರು ಕೇಂದ್ರ ಚುನಾವಣಾ ಆಯೋಗಕ್ಕೆ ವರ್ಗಾವಣೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

ಲಾಭದಾಯಕ ಹುದ್ದೆಗೆ ಸಂಬಂಧಪಟ್ಟಂತೆ ರಾಜ್ಯ ಹೈಕೋರ್ಟ್‌ನಲ್ಲೂ ವಿಚಾರಣೆ ನಡೆಯುತ್ತಿದೆ. ಮೊದಲು ಈ ಪ್ರಕರಣ ಏಕಸದಸ್ಯ ಪೀಠದ ಮುಂದೆ ಬಂದಿತ್ತು. ಆನಂತರ ವಿಭಾಗೀಯ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.
ಇವನ್ನೂ ಓದಿ