ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಂದ್ ಯಾಕೆ ಮಾಡಿದ್ರಿ?; ಸಿಎಂಗೆ ಹೈಕೋರ್ಟ್ (High court | BJP | Yeddyurappa | PIL | Bharadwaj)
NRB
ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬಿಜೆಪಿ ಕರೆ ನೀಡಿದ್ದ ಬಂದ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿಯಾಗಿದ್ದರೂ ಸಿಎಂ ಹಾಗೂ ಇನ್ನಿತರರು ಪ್ರತಿಕ್ರಿಯೆ ನೀಡದೆ ಇರುವುದನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

ಬಸವೇಶ್ವರನಗರದ ಬೋಪಣ್ಣ ಎಂಬುವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಜೆ.ಎಸ್.ಖೇಹರ್ ಮತ್ತು ನ್ಯಾ.ಎ.ಎಸ್.ಬೋಪಣ್ಣ ಅವರಿದ್ದ ವಿಭಾಗೀಯ ಪೀಠ ಪ್ರತಿವಾದಿಯಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ ಮತ್ತು ಪಕ್ಷದ ಪರ ಆಕ್ಷೇಪಣೆಗಳನ್ನು ಕೇಳದೆ ತೀರ್ಪು ನೀಡಬೇಕಾಗುತ್ತದೆ ಎಂದು ಗಂಭೀರ ಎಚ್ಚರಿಕೆಯನ್ನು ನೀಡಿದೆ.

ಬಂದ್ ಕುರಿತಂತೆ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಸೋಮವಾರ ನಡೆದಾಗ ಈ ಮೂವರ ಪರ ವಕೀಲರು ಕೋರ್ಟ್‌ಗೆ ಹಾಜರಾಗಿರಲಿಲ್ಲವಾಗಿತ್ತು. ಅಲ್ಲದೆ ನೋಟಿಸ್‌ಗೆ ಯಾವುದೇ ಉತ್ತರವೂ ಬಂದಿರಲಿಲ್ಲ. ಇದು ನ್ಯಾಯಮೂರ್ತಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಮಧ್ಯೆ ಅರ್ಜಿದಾರರ ಆರೋಪಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಎಂಟು ವಾರಗಳ ಕಾಲಾವಕಾಶ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.
ಇವನ್ನೂ ಓದಿ