ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯ ಬಜೆಟ್: ಸಿಎಂ ತವರು ಜಿಲ್ಲೆಗೆ ಹೆಚ್ಚು ಆದ್ಯತೆ (State budget 2011-12 | BJP | Yeddyurappa | Shivmoga | Agriculture budget)
ರಾಜ್ಯ ಬಜೆಟ್: ಸಿಎಂ ತವರು ಜಿಲ್ಲೆಗೆ ಹೆಚ್ಚು ಆದ್ಯತೆ
ಬೆಂಗಳೂರು, ಗುರುವಾರ, 24 ಫೆಬ್ರವರಿ 2011( 17:44 IST )
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಮಂಡಿಸಿದ 2011-12ನೇ ಸಾಲಿನ ಬಜೆಟ್‌ನಲ್ಲಿ ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.
ಪ್ರಸಕ್ತ ಸಾಲಿನ ಮುಂಗಡ ಪತ್ರದಲ್ಲಿ ಶಿವಮೊಗ್ಗ ಜಿಲ್ಲೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿರುವ ಅವರು, ಶಿವಮೊಗ್ಗ ವಿಮಾನ ನಿಲ್ದಾಣ, ಶೃಂಗೇರಿ ರಂಭಾಪುರಿ ರಸ್ತೆ ಅಭಿವೃದ್ಧಿಗೆ 35 ಕೋಟಿ ರೂ., ಶಿವಮೊಗ್ಗ ವರ್ತುಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ 100 ಕೋಟಿ ರೂ., ಶಿವಮೊಗ್ಗ ಜಿಲ್ಲೆ ಅಂಜನಾಪುರ ಜಲಾಶಯದ ರಸ್ತೆ, ಉದ್ಯಾನವನ ಅಭಿವೃದ್ಧಿ, ದೋಣಿ ವಿಹಾರ ಸೌಲಭ್ಯಕ್ಕಾಗಿ 10 ಕೋಟಿ ರೂ., ಆಯುರ್ವೇದ ಕಾಲೇಜ್ ಸ್ಥಾಪನೆಗೆ 10 ಕೋಟಿ ರೂ. ಅನುದಾನ ಮೀಸಲಿರಿಸಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದ ಹೊರಾಂಗಣ ಮತ್ತು ಒಳಾಂಗಣ ಕ್ರೀಡಾ ಸಮುಚ್ಚಯವನ್ನು ಶಿವಮೊಗ್ಗದ ವಿದ್ಯಾನಗರದಲ್ಲಿ ನಿರ್ಮಿಸಲು 10 ಕೋಟಿ ರೂ. ಅನುದಾನ ಮೀಸಲಿರಿಸಿದ್ದಾರೆ.
ಚಿತ್ರದುರ್ಗದಲ್ಲಿ ಎರಡನೇ ವಿಜ್ಞಾನ ಸಂಸ್ಥೆ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ಸ್ಥಾಪಿಸಲಾಗುತ್ತಿದ್ದು, ಇದಕ್ಕಾಗಿ ಅಗತ್ಯವಿರುವ 4,250 ಎಕರೆ ಜಮೀನಿನಲ್ಲಿ ಈಗಾಗಲೇ 1,500 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಟಾಟಾ ಅಣು ಸಂಶೋಧನಾ ಕೇಂದ್ರ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಳಿಗೂ ಸಹ ಜಮೀನು ಒದಗಿಸಲಾಗಿದೆ. ಸಣ್ಣ ಕೈಗಾರಿಕಾ ವಲಯವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೆ 400 ಎಕರೆ ಜಮೀನನ್ನು ಆಧುನಿಕ ವಸತಿ ಯೋಜನೆ ವೇದವತಿ ನಗರವನ್ನು ಕೈಗೆತ್ತಿಕೊಳ್ಳಲು ಗೃಹಮಂಡಳಿಗೆ 50 ಕೋಟಿ ರೂ.ಒದಗಿಸಲಾಗಿದೆ.