ಕೇಂದ್ರ ಸರಕಾರ ಸೇರಿದಂತೆ ದೇಶದ ವಿವಿಧ ರಾಜ್ಯಗಳು ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಮಾಡುವ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.
ರೇಸ್‌ಕೋರ್ಸ್ ರಸ್ತೆಯ ತಮ್ಮ ನಿವಾಸದಲ್ಲಿ 69ನೇ ಜನ್ಮದಿನದ ಸಂಭ್ರಮದ ನಡುವೆ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಡಿನ ರೈತನ ಬದುಕು ಸುಧಾರಣೆ ಹಾಗೂ ರಾಜ್ಯದ ಅಭಿವೃದ್ಧಿ ತನ್ಮ ಜೀವನದ ಮುಖ್ಯ ಗುರಿ ಎಂದರು.
ರೈತರ ಅಭಿವೃದ್ಧಿ ಸಲುವಾಗಿಯೇ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದೇನೆ. ಅಧಿವೇಶನದ ನಂತರ ಜಿಲ್ಲಾ ಹಾಗೂ ತಾಲೂಕುಗಳಿಗೆ ಭೇಟಿ ನೀಡಿ ಈ ಯೋಜನೆಗಳ ಅನುಷ್ಠಾನವನ್ನು ಖುದ್ದು ಪರಿಶೀಲಿಸುವುದಾಗಿ ಹೇಳಿದರು.
ಬಜೆಟ್ ನಂತರ ಸಂಪುಟ ವಿಸ್ತರಣೆ: ಈ ಬಜೆಟ್ ಅಧಿವೇಶನದ ನಂತರ ರಾಜ್ಯ ಸಚಿವ ಸಂಪುಟವನ್ನು ವಿಸ್ತರಿಸುವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು. ಅಧಿವೇಶನ ಮುಗಿದ ನಂತರ ಪಕ್ಷದ ಮುಖಂಡರ ಜತೆ ಚರ್ಚಿಸಿ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿ ಮಾಡುವುದಾಗಿ ಹೇಳಿದರು.