ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವಿಧಾನಸಭೆ: ಚರ್ಚೆಗೆ ಪಟ್ಟು-ಕಾಂಗ್ರೆಸ್, ಜೆಡಿಎಸ್ ಸಭಾತ್ಯಾಗ (Church attack | Congress | JDS | BJP | Yeddyurappa | Vidhana sabhe)
2008ರಲ್ಲಿ ರಾಜ್ಯದ ವಿವಿಧೆಡೆ ನಡೆದ ಚರ್ಚ್ ದಾಳಿ ಕುರಿತಂತೆ ನ್ಯಾಯಮೂರ್ತಿ ಸೋಮಶೇಖರ್ ಆಯೋಗದ ವರದಿ ಕುರಿತು ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಮಾಡಿಕೊಡದ ಸಭಾಧ್ಯಕ್ಷರ ಅವರ ಕ್ರಮವನ್ನು ಪ್ರತಿಭಟಿಸಿ ಕಾಂಗ್ರೆಸ್-ಜೆಡಿಎಸ್ ಸಭಾತ್ಯಾಗ ಮಾಡಿದ ಹಿನ್ನೆಲೆಯಲ್ಲಿ ಕಪಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.

ಆಯೋಗದ ವರದಿ ಕ್ರೈಸ್ತ ಸಮುದಾಯದವರ ವಿರುದ್ಧವಾಗಿದೆ. ಚರ್ಚ್‌ಗಳ ಮೇಲೆ ನಡೆದ ದಾಳಿ ಕುರಿತಂತೆ ನ್ಯಾಯಸಮ್ಮತ ವರದಿ ನೀಡಿಲ್ಲ. ಈ ಬಗ್ಗೆ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಪಟ್ಟು ಹಿಡಿದು ಒತ್ತಾಯಿಸಿದಾಗ ಸಭಾಧ್ಯಕ್ಷ ಬೋಪಯ್ಯ ಅದಕ್ಕೆ ಅವಕಾಶ ನೀಡಲಿಲ್ಲ.

ಸಭಾಧ್ಯಕ್ಷರ ಈ ಧೋರಣೆಯನ್ನು ಪ್ರತಿಭಟಿಸಿ ಎರಡೂ ಪಕ್ಷಗಳ ಸದಸ್ಯರು ತಮ್ಮ ನಾಯಕರಾದ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಅವರ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು.

ಸೋಮವಾರ ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮಶೇಖರ್ ಆಯೋಗದ ಕುರಿತಂತೆ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಸಭಾಧ್ಯಕ್ಷರಿಗೆ ಮನವಿ ಮಾಡಿದ್ದರು. ಆಗ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಕುಮಾರ್, ಸಿದ್ದರಾಮಯ್ಯನವರ ಒತ್ತಾಯಕ್ಕೆ ತೀವ್ರವಾಗಿ ಆಕ್ಷೇಪಿಸಿ ಈ ವಿಷಯ ನಿಲುವಳಿ ಸೂಚನೆಯಡಿ ಚರ್ಚೆಗೆ ಬರುವುದಿಲ್ಲ. ಚರ್ಚೆಗೆ ಅವಕಾಶ ಮಾಡಿಕೊಡಬೇಡಿ ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದರು.

ಈ ಮಧ್ಯೆ ಆಡಳಿತಾರೂಢ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಆದರೆ ಪದೇ, ಪದೇ ಮನವಿ ಮಾಡಿಕೊಂಡರೂ ಸಭಾಧ್ಯಕ್ಷರು ಸ್ಪಂದಿಸದೆ ಹೋದಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಸರಕಾರದ ವಿರುದ್ಧ ಘೋಷಣೆ ಕೂಗಿ ಸದನದಿಂದ ಹೊರನಡೆದರು.
ಇವನ್ನೂ ಓದಿ