ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಇನ್ಫೋಸಿಸ್ ಮೂರ್ತಿಯಿಂದ್ಲೇ ವಿಶ್ವಕನ್ನಡ ಸಮ್ಮೇಳನ ಉದ್ಘಾಟನೆ: ಸಿಎಂ (Infosys | IT company | N R Narayana Murthy | World Kannada Conference | Yeddyurappa)
WD
ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವಕನ್ನಡ ಸಮ್ಮೇಳನವನ್ನು ಐಟಿ ದಿಗ್ಗಜ ಇನ್ಫೋಸಿಸ್‌ನ ನಾರಾಯಣ ಮೂರ್ತಿ ಅವರಿಂದ ಉದ್ಘಾಟಿಸುವುದಕ್ಕೆ ಸಾಹಿತಿಗಳು, ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು ಕೂಡ, ವಿಶ್ವಕನ್ನಡ ಸಮ್ಮೇಳನವನ್ನು ನಾರಾಯಣಮೂರ್ತಿಯವರೇ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಧಾನಸಭೆಯಲ್ಲಿ ಖಚಿತಪಡಿಸಿದ್ದಾರೆ.

ಇಂದು ನಡೆದ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು, ಗಡಿನಾಡು ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವಕನ್ನಡ ಸಮ್ಮೇಳನವನ್ನು ಇನ್ಫೋಸಿಸ್ ನಾರಾಯಣಮೂರ್ತಿಯವರೇ ಉದ್ಘಾಟಿಸಲಿದ್ದಾರೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈಗಾಗಲೇ ಆಹ್ವಾನ ಪತ್ರಿಕೆ ಸಿದ್ದಗೊಂಡಿದ್ದು, ಹಂಚುವ ಕಾರ್ಯ ಆರಂಭವಾಗಿದೆ ಎಂದು ವಿವರಿಸಿದರು.

ವಿಶ್ವಕನ್ನಡ ಸಮ್ಮೇಳನದ ಉದ್ಘಾಟನೆಯನ್ನು ಇನ್ಫೋಸಿಸ್ ಮುಖ್ಯಸ್ಥ ಎನ್.ಆರ್. ನಾರಾಯಣ ಮೂರ್ತಿಯವರಿಂದಲೇ ಉದ್ಘಾಟಿಸಲು ಎಲ್ಲರ ಸಲಹೆ ಪಡೆದು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ. ಹಾಗಾಗಿ ಇದರಲ್ಲಿ ಯಾವುದೇ ಅಪಸ್ವರ ಬೇಡ ಎಂದರು.

ಸಮ್ಮೇಳನಕ್ಕಾಗಿ 30 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ. ವಿಶ್ವಕನ್ನಡ ಸಮ್ಮೇಳನದಲ್ಲಿ 15 ವೇದಿಕೆಯಲ್ಲಿ 5,600 ಕಲಾವಿದರಿಂದ ವಿವಿಧ ರೀತಿಯ ಕಲಾ ಪ್ರದರ್ಶನ ನಡೆಯಲಿದೆ. ಅಲ್ಲದೇ ಸಾಹಿತಿಗಳು, ರಂಗ ಕಲಾವಿದರು, ಸಿನಿಮಾ ರಂಗ ಸೇರಿದಂತೆ ಎಲ್ಲಾ ರಂಗದ ಗಣ್ಯರನ್ನು ಆಹ್ವಾನಿಸಲಾಗಿದೆ. ದಯಮಾಡಿ ಎಲ್ಲರೂ ಸಮ್ಮೇಳನಕ್ಕೆ ಸಹಕರಿಸಬೇಕು ಎಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ಕನ್ನಡ ವಿರೋಧಿ ಧೋರಣೆ ತಳೆದಿದ್ದಾರೆ. ಅಲ್ಲದೇ ಕನ್ನಡಕ್ಕೆ ಅವರ ಕೊಡುಗೆ ಏನು ಎಂದು ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವು ಸಾಹಿತಿಗಳು ಗಂಭೀರವಾಗಿ ಪ್ರಶ್ನಿಸಿ, ವಿಶ್ವಕನ್ನಡ ಸಮ್ಮೇಳನವನ್ನು ನಾರಾಯಣಮೂರ್ತಿಯವರಿಂದ ಉದ್ಘಾಟಿಸುವುದು ಬೇಡ ಎಂದು ಆಕ್ಷೇಪ ವ್ಯಕ್ತಪಡಿಸಿ ಮನವಿ ಸಲ್ಲಿಸಿದ್ದರು.
ಇವನ್ನೂ ಓದಿ