ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೌಂಟ್ ಡೌನ್: ಕುಂದಾನಗರಿಯಲ್ಲಿ ವಿಶ್ವಕನ್ನಡ ಸಮ್ಮೇಳನ (World Kannada Conference | Belgaum | N R Narayana Murthy | BJP)
ಗಡಿನಾಡು ಕುಂದಾನಗರಿಯಲ್ಲಿ ನಡೆಯಲಿರುವ ವಿಶ್ವಕನ್ನಡ ಸಮ್ಮೇಳನದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಮ್ಮೇಳನಕ್ಕೆ ಜಿಲ್ಲಾಡಳಿತ ಪೂರ್ಣ ಪ್ರಮಾಣದಲ್ಲಿ ಸಜ್ಜಾಗಿದೆ.

ವಿಶ್ವಕನ್ನಡ ಸಮ್ಮೇಳನಕ್ಕಾಗಿ ಆಡಳಿತಾರೂಢ ಬಿಜೆಪಿ ಸರಕಾರ 30 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ. ಮಾರ್ಚ್ 11ರಿಂದ ಮೂರು ದಿನಗಳ ಕಾಲ ವಿಶ್ವಕನ್ನಡ ಸಮ್ಮೇಳನ ನಡೆಯಲಿದೆ. ಸಮ್ಮೇಳನವನ್ನು ಇನ್ಫೋಸಿಸ್ ದಿಗ್ಗಜ ಎನ್.ಆರ್.ನಾರಾಯಣಮೂರ್ತಿ ಅವರು ಉದ್ಘಾಟಿಸಲಿದ್ದಾರೆ.

ಸಮ್ಮೇಳನದ ಉದ್ಘಾಟನೆಗೂ ಮುನ್ನ ಸಾಕಷ್ಟು ವಿವಾದ ಸೃಷ್ಟಿಯಾಗಿದ್ದು, ನಾರಾಯಣಮೂರ್ತಿ ಅವರು ಸಮ್ಮೇಳನ ಉದ್ಘಾಟಿಸಬಾರದು ಎಂದು ಸಾಹಿತಿಗಳು ಹಾಗೂ ಕನ್ನಡ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಆದರೆ ಮೂರ್ತಿಯವರೇ ಸಮ್ಮೇಳನ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸ್ಪಷ್ಟಪಡಿಸಿದ್ದರು. ಇದೀಗ ಬೆಳಗಾವಿ ಮೇಯರ್ ಅವರ ಹೆಸರನ್ನು ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಹಾಕಿಲ್ಲದ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆಯೊಡ್ಡಿದ್ದಾರೆ. ಅಷ್ಟೇ ಅಲ್ಲ ಇದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಸಮ್ಮೇಳನದಲ್ಲಿ ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಆಗಮಿಸುವಂತೆ ಸರಕಾರ ಜಾಗತಿಕವಾಗಿ ಆಹ್ವಾನ ನೀಡಿದೆ. ಈಗಾಗಲೇ ಆಹ್ವಾನ ಪತ್ರಿಕೆ ಮುದ್ರಣಗೊಂಡಿದ್ದು, ಎಲ್ಲೆಡೆ ಹಂಚಲಾಗಿದೆ. ಪ್ರಮುಖ ಗಣ್ಯರಿಗೂ ರವಾನಿಸಲಾಗಿದೆ.

ಮಹಾರಾಷ್ಟ್ರ-ಕರ್ನಾಟಕ ಗಡಿನಾಡಾದ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಶ್ವಕನ್ನಡ ಸಮ್ಮೇಳನಕ್ಕೆ ಇಡೀ ಕುಂದಾನಗರಿಯೇ ಸಜ್ಜಾಗಿದೆ. ಕನ್ನಡಿಗರು ಸೇರಿದಂತೆ ಮರಾಠಿಗರು ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಉತ್ಸಾಹ ತೋರುತ್ತಿದ್ದಾರೆ. ವಿವಿಧ ಜಿಲ್ಲೆಗಳ ಟ್ಯಾಬ್ಲೋಗಳು ಕೂಡ ಬೆಳಗಾವಿ ತಲುಪಿದೆ. ಜಿಲ್ಲಾಡಳಿತ ಕೂಡ ಎಲ್ಲಾ ರೀತಿಯಿಂದಲೂ ಸಮ್ಮೇಳನದ ಯಶಸ್ಸಿಗೆ ಸಿದ್ದತೆ ಮಾಡಿಕೊಂಡಿದೆ. ಅದೇ ರೀತಿ ಕನ್ನಡ ಚಿತ್ರರಂಗ ಸಕ್ರಿಯವಾಗಿ ಭಾಗವಹಿಸುವುದಾಗಿ ತಿಳಿಸಿದ್ದು, ಆ ಮೂರು ದಿನಗಳ ಕಾಲ ಸಿನಿಮಾರಂಗಕ್ಕೆ ರಜೆ ಎಂದು ಘೋಷಿಸಿದೆ.
ಇವನ್ನೂ ಓದಿ