ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಎಚ್‌ಡಿಕೆ ಗಣಿಕಪ್ಪ ಆರೋಪ; ಯಡಿಯೂರಪ್ಪಗೆ ಹೈಕಮಾಂಡ್ ಬುಲಾವ್ (BJP | Kumaraswamy | JDS | Deve gowda | yeddyurappa | Adavni)
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರರ ಪ್ರೇರಣಾ ಶಿಕ್ಷಣ ಟ್ರಸ್ಟ್‌ಗೆ ಹಲವು ಸಂಸ್ಥೆಗಳಿಂದ ಅಕ್ರಮವಾಗಿ ಕೋಟ್ಯಂತರ ಹಣ ಸಂದಾಯವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಗುರುವಾರ ದೆಹಲಿಗೆ ಕರೆಯಿಸಿಕೊಂಡಿದೆ.

ಮುಖ್ಯಮಂತ್ರಿ ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಟ್ರಸ್ಟಿಗಳಾಗಿರುವ ಪ್ರೇರಣಾ ಶಿಕ್ಷಣ ಟ್ರಸ್ಟ್‌ಗೆ ಮುಖ್ಯಮಂತ್ರಿಗಳ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡು ಸುಮಾರು 27 ಕೋಟಿ ರೂಪಾಯಿಯಷ್ಟು ಬೃಹತ್ ಮೊತ್ತದ ದೇಣಿಗೆಯನ್ನು ಪಡೆಯಲಾಗಿದೆ. ಸಜ್ಜನ್ ಅವರ ಕಂಪನಿಗೆ ಗಣಿಗಾರಿಕೆ ವಹಿವಾಟು ನಡೆಸಲು ಈ ಕಪ್ಪವನ್ನು ಯಡಿಯೂರಪ್ಪ ಪಡೆದಿರುವುದಾಗಿ ಬುಧವಾರ ಕುಮಾರಸ್ವಾಮಿ ನವದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ದಾಖಲೆ ಸಹಿತ ಬಹಿರಂಗಪಡಿಸಿದ್ದರು.

ಅಲ್ಲದೇ ಭ್ರಷ್ಟಾಚಾರ ಎಸಗಿರುವ ಮುಖ್ಯಮಂತ್ರಿಯನ್ನು ಬಿಜೆಪಿಯ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಅವರು ಕ್ಲೀನ್ ಚಿಟ್ ನೀಡಿರುವುದು ಅಚ್ಚರಿ ತಂದಿದೆ ಎಂದು ತಿರುಗೇಟು ನೀಡಿದ್ದರು.

ಕುಮಾರಸ್ವಾಮಿಯ ಆರೋಪದ ಹಿನ್ನೆಲೆಯಲ್ಲಿ ಹೈಕಮಾಂಡ್ ಸಿಎಂಗೆ ಬುಲಾವ್ ನೀಡಿದೆ. ಆ ಕಾರಣಕ್ಕಾಗಿ ನವದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆದರೆ ಕುಮಾರಸ್ವಾಮಿ ಆರೋಪದ ಬಗ್ಗೆ ಹೈಕಮಾಂಡ್ ನನ್ನಿಂದ ಯಾವುದೇ ಸ್ಪಷ್ಟನೆ ಕೇಳಿಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅಗತ್ಯವಿದ್ದರೆ ನನ್ನ ಮಕ್ಕಳು ನಡೆಸುತ್ತಿರುವ ಪ್ರೇರಣಾ ಶಿಕ್ಷಣ ಟ್ರಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿ. ಅಷ್ಟೇ ಅಲ್ಲ ಮುಖ್ಯಮಂತ್ರಿ ಕಚೇರಿಯ ದುರುಪಯೋಗ ಆಗಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಕಾನೂನು ಬದ್ದವಾಗಿಯೇ ದೇಣಿಗೆ ಪಡೆಯಲಾಗಿದೆ ಎಂದರು.
ಇವನ್ನೂ ಓದಿ