ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯದ ಮಠಗಳಿಗೆ ಮತ್ತಷ್ಟು ಅನುದಾನ: ಸಿಎಂ ಘೋಷಣೆ (BJP | Yeddyurappa | Vidhana sowdha | Congress | JDS)
ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ರಾಜ್ಯದ ಮಠಗಳಿಗೆ ಮತ್ತಷ್ಟು ಅನುದಾನವನ್ನು ಘೋಷಿಸಿದ್ದಾರೆ.

ಬಜೆಟ್ ಮೇಲಿನ ಚರ್ಚೆಗೆ ಬುಧವಾರ ವಿಧಾನಸಭೆಯಲ್ಲಿ ಉತ್ತರಿಸಿದ ಅವರು, ಚಿಕ್ಕಮಗಳೂರಿನ ದತ್ತಪೀಠ, ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ, ಆದಿಚುಂಚನಗಿರಿ ಕ್ಷೇತ್ರದಲ್ಲಿರುವ ಕಾಲಭೈರವೇಶ್ವರ ಸ್ವಾಮಿ ಸಂಸ್ಕೃತ, ವೇದ ಮತ್ತು ಆಗಮ ಮಹಾವಿದ್ಯಾಲಯದ ನೂತನ ಕಟ್ಟಡ ಹಾಗೂ ವಸತಿ ಸಮುಚ್ಚಯಕ್ಕೆ ತಲಾ ಐದು ಕೋಟಿ ರೂಪಾಯಿ, ಉಡುಪಿ ಮಧ್ವಾಚಾರ್ಯ ಪಾಜಕ ಕ್ಷೇತ್ರ ಹಾಗೂ ಬೆಳ್ತಂಗಡಿ ತಾಲೂಕು ವೇಣೂರಿನ ದಿಗಂಬರ ಜೈನ ತೀರ್ಥಕ್ಷೇತ್ರದ ಅಭಿವೃದ್ಧಿಗೆ ತಲಾ ಎರಡು ಕೋಟಿ ರೂಪಾಯಿ ನೀಡುವುದಾಗಿ ಪ್ರಕಟಿಸಿದರು.

ಮೇ 30ಕ್ಕೆ ಸರಕಾರ ಮೂರು ವರ್ಷ ಪೂರೈಸಲಿದ್ದು, ಉಳಿದ ಎರಡು ವರ್ಷಗಳ ಅವಧಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ನೀಲನಕ್ಷೆ ರೂಪಿಸುತ್ತೇವೆ. ಪ್ರತಿಪಕ್ಷಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ನಂತರ ಇದಕ್ಕೆ ಅಂತಿಮ ರೂಪ ನೀಡಲಾಗುವುದು. ಆಡಳಿತದಲ್ಲಿ ಏನಾದರೂ ಲೋಪದೋಷಗಳು ಇದ್ದರೆ ಸರಿಪಡಿಸಿಕೊಳ್ಳುತ್ತೇವೆ ಎಂದರು.

ಬಜೆಟ್ ಕಾರ್ಯಕ್ರಮಗಳು ಕಾಲಮಿತಿಯಲ್ಲಿ ಅನುಷ್ಠಾನಗೊಳ್ಳದೆ ಇರುವುದನ್ನು ಗಮನಿಸಿದ್ದೇವೆ. ಆದರೆ ಇನ್ನು ಮುಂದೆ ಈ ರೀತಿ ಆಗುವುದಿಲ್ಲ. 2011-12ನೇ ಸಾಲಿನ ಬಜೆಟ್ ಮಂಡಿಸಿದ ಮರು ದಿನವೇ ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿತ್ತು. ಇದಾದ ನಂತರ ಕಾರ್ಯದರ್ಶಿಗಳ ಮಟ್ಟದ ಸಭೆ ಕರೆದು ಹೊಸ ಯೋಜನೆಗಳ ಅನುಷ್ಠಆನ ಸಂಬಂಧ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಇವನ್ನೂ ಓದಿ