ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಚನ್ನಪಟ್ಟಣದಿಂದ ಸ್ಪರ್ಧಿಸುತ್ತೇನೆ: ಕುಮಾರಸ್ವಾಮಿ ಘೋಷಣೆ (HD Kumaraswamy | Channapattana | Assembly by-election | Karnataka)
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಎನ್ನುವುದು ಖಚಿತವಾಗಿದೆ. ಕಳೆದ ಕೆಲವು ದಿನಗಳಿಂದ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ವಿಚಾರವನ್ನು ಸ್ವತಃ ಕುಮಾರಸ್ವಾಮಿಯವರೇ ಪ್ರಕಟಿಸಿದ್ದಾರೆ.

ಚನ್ನಪಟ್ಟಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಈ ವಿಚಾರವನ್ನು ಕುಮಾರಸ್ವಾಮಿ ಘೋಷಿಸಿದರು. ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಈ ನಿರ್ಧಾರಕ್ಕೆ ಬಂದಿದ್ದೇನೆ. ಮಾರ್ಚ್ 23ರ ಬುಧವಾರದಂದು ತಾನು ನಾಮಪತ್ರ ಸಲ್ಲಿಸಲಿದ್ದೇನೆ ಎಂದರು.

ಪ್ರಸಕ್ತ ರಾಮನಗರ ಸಂಸದರಾಗಿರುವ ಕುಮಾರಸ್ವಾಮಿಯವರು ಚನ್ನಪಟ್ಟಣದಲ್ಲಿ ಗೆಲುವು ಸಾಧಿಸಿದರೆ ಲೋಕಸಭಾ ಸದಸ್ಯನ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದರೊಂದಿಗೆ ರಾಜ್ಯ ರಾಜಕಾರಣಕ್ಕೆ ಅವರು ಮರಳುತ್ತಿರುವುದು ಬಹುತೇಕ ಖಚಿತ.

ಭಾನುವಾರ ಚನ್ನಪಟ್ಟಣದಲ್ಲಿ ನೆರೆದಿದ್ದ ಭಾರೀ ಸಂಖ್ಯೆಯ ಕಾರ್ಯಕರ್ತರು ಮತ್ತು ಮುಖಂಡರ ಜತೆ ಸಮಾಲೋಚನೆ ನಡೆಸಿದ ಅವರು, ನಾನು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸುತ್ತೇನೆ. ಈ ಸಂಬಂಧ ಬುಧವಾರ ನಾಮಪತ್ರ ಸಲ್ಲಿಸುತ್ತೇನೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ನಾನೇ ಒಪ್ಪಿಸುತ್ತೇನೆ. ಅವರು ಒಪ್ಪಿಗೆ ಸೂಚಿಸುವ ವಿಶ್ವಾಸ ನನಗಿದೆ. ನಾಳೆಯೇ ಅವರನ್ನು ಭೇಟಿ ಮಾಡುತ್ತೇನೆ ಎಂದರು.

ಜೆಡಿಎಸ್‌ನಲ್ಲಿದ್ದ ಅಶ್ವತ್ಥ್ ಅವರು ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ ನಂತರ ಈ ಕ್ಷೇತ್ರ ತೆರವಾಗಿತ್ತು. ಅದಕ್ಕೀಗ ಉಪಚುನಾವಣೆ ಘೋಷಣೆಯಾಗಿದೆ. ಇದೂ ಸೇರಿದಂತೆ ಒಟ್ಟು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ತಿಂಗಳು ಚುನಾವಣೆ ನಡೆಯಲಿದೆ.
ಇವನ್ನೂ ಓದಿ