ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಎಚ್‌ಡಿಕೆ ಸಿಎಂ ಅಭ್ಯರ್ಥಿ,ಚನ್ನಪಟ್ಟಣ ಸ್ಪರ್ಧೆ ಬೇಡ: ಗೌಡ (Kumaraswamy | Deve gowda | Channa pattana | Congress | BJP | JDS)
PTI
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತೇನೆ ಎಂದು ನೀಡಿರುವ ಹೇಳಿಕೆ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿ, ಕುಮಾರಸ್ವಾಮಿ ವಿಧಾನಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾದ ಅಗತ್ಯವಿಲ್ಲ. ಅವರೊಬ್ಬ ಮುಖ್ಯಮಂತ್ರಿ ಅಭ್ಯರ್ಥಿ ಎಂದು ತಿಳಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪುತ್ರ ಎಚ್‌ಡಿಕೆ ಸ್ಪರ್ಧಿಸಬೇಕಾದ ಅಗತ್ಯವಿಲ್ಲ. ಅವರು ಬೇಕಾದರೆ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲಿ ಎಂದು ಸಲಹೆ ನೀಡಿರುವ ಗೌಡರು, ಚನ್ನಪಟ್ಟಣ ಕ್ಷೇತ್ರಕ್ಕೆ ಬೇರೆ ಅಭ್ಯರ್ಥಿಯನ್ನು ನಿಲ್ಲಿಸುವ ಬಗ್ಗೆ ಚರ್ಚಿಸುವುದಾಗಿ ಮಂಡ್ಯದ ಇಜ್ಜಲಘಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ಕುಮಾರಸ್ವಾಮಿ ಅವರು ನನ್ನ ಜೊತೆ ಯಾವುದೇ ಚರ್ಚೆ ನಡೆಸದೆ, ಕಳೆದ ಸಂಜೆ ಬೆಂಬಲಿಗರ ಒತ್ತಡಕ್ಕೆ ಮಣಿದು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿರುವ ಬಗ್ಗೆ ದೇವೇಗೌಡ ಅಪಸ್ವರ ಎತ್ತಿದ್ದಾರೆ.

ಇಜ್ಜಲಘಟ್ಟದಲ್ಲಿ ದೇವೇಗೌಡ, ಸಿಎಂ ಅಭ್ಯರ್ಥಿ, ಸ್ಪರ್ಧಿಸುವುದಾದರೆ ಸಾಮಾನ್ಯ ಚುನಾವಣೆಯಲ್ಲಿ ಸ್ಪರ್ಧಿಸಲಿ ಎಂದು ಹೇಳಿದರು. ಅವರು ಈ ಚುನಾವಣೆಯಲ್ಲಿ ನಿಲ್ಲಬೇಕಾ, ಎಚ್ ಡಿಕೆ ಸ್ಪರ್ಧೆ ಅಗತ್ಯವಿಲ್ಲ. ನೀವೇ ಹಿತೈಷಿಯಾಗಿದ್ದರೆ ಹೇಳಿ ಆಮೇಲೆ ನಾನು ಹೇಳ್ತೇನೆ.

ಕಾಂಗ್ರೆಸ್‌ನ ಇಬ್ಬರು ಹಾಗೂ ಜೆಡಿಎಸ್‌ನ ಓರ್ವ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿ ತೆರವಾಗಿರುವ ಜಗಳೂರು, ಬಂಗಾರಪೇಟೆ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಏಪ್ರಿಲ್ 13ರಂದು ಉಪ ಚುನಾವಣೆ ನಡೆಯಲಿದೆ. ಆ ನಿಟ್ಟಿನಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್‌ಗೆ ಈ ಮೂರು ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ.

ಆ ನಿಟ್ಟಿನಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ತಾನೇ ಸ್ಪರ್ಧಿಸುವುದಾಗಿ ಭಾನುವಾರ ಸಂಜೆ ಕುಮಾರಸ್ವಾಮಿ ಅಧಿಕೃತವಾಗಿ ಘೋಷಿಸಿ, ತಾನು ತಂದೆ ದೇವೇಗೌಡರ ಮನವೊಲಿಸುವುದಾಗಿ ಹೇಳಿದ್ದರು. ಆದರೆ ದೇವೇಗೌಡರು ಸೋಮವಾರ ಅಪಸ್ವರ ಎತ್ತಿದ ಹಿನ್ನೆಲೆಯಲ್ಲಿ ಚನ್ನಪಟ್ಟಣದಿಂದ ಸ್ಪರ್ಧಿಸುವ ಬಗ್ಗೆ ಇಂದು ಸಂಜೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಇವನ್ನೂ ಓದಿ