ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೊಂದಲಕ್ಕೆ ತೆರೆ-ಸಿಎಂ ವಿರುದ್ಧ ಎಫ್ಐಆರ್ ಇಲ್ಲ: ಲೋಕಾಯುಕ್ತ (BJP | Yeddyurappa | Lokayuktha court | FIR | Land Scam | Sohan kumar)
ಭೂ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸುವ ಅಗತ್ಯವಿಲ್ಲ ಎಂದು ಲೋಕಾಯುಕ್ತ ಎಡಿಜಿಪಿ ಆರ್.ಕೆ.ದತ್ತ ಸ್ಪಷ್ಟಪಡಿಸುವ ಮೂಲಕ ಈ ಬಗೆಗಿನ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಂತಾಗಿದೆ.

ಭೂ ಹಗರಣದ ಪ್ರಕರಣದ ಬಗ್ಗೆ ಯಡಿಯೂರಪ್ಪ ವಿರುದ್ಧ ತನಿಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ಕೋರ್ಟ್ ಆದೇಶ ನೀಡಿತ್ತು. ಏತನ್ಮಧ್ಯೆ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸಬೇಕೆ ಅಥವಾ ವಿಚಾರಣೆ ಮಾತ್ರವೇ ಎಂಬ ಕಾನೂನು ಜಿಜ್ಞಾಸೆ ತಲೆದೋರಿತ್ತು. ಆ ನಿಟ್ಟಿನಲ್ಲಿ ಲೋಕಾಯುಕ್ತ ಪೊಲೀಸರು ಸೋಮವಾರ ಲೋಕಾಯುಕ್ತ ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿದ್ದರು.

ಲೋಕಾಯುಕ್ತ ನ್ಯಾಯಾಲಯ 202/1ರ ಅಡಿಯಲ್ಲಿ ವಿಚಾರಣೆ ನಡೆಸುವಂತೆ ಆದೇಶಿಸಿದೆ. ಹಾಗಾಗಿ ಮುಖ್ಯಮಂತ್ರಿ ವಿರುದ್ಧ ಎಫ್ಐಆರ್ ದಾಖಲಿಸುವ ಅಗತ್ಯವಿಲ್ಲ ಎಂದು ದತ್ತ ತಿಳಿಸಿದ್ದಾರೆ.

ಭೂ ಹಗರಣದ ತನಿಖೆ ಇಂದಿನಿಂದಲೇ ಆರಂಭಗೊಳ್ಳಲಿದೆ ಎಂದು ವಿವರಿಸಿದ್ದಾರೆ. ಪ್ರಕರಣದ ತನಿಖೆ ನಡೆಸಬೇಕಾಗಿದ್ದ ಲೋಕಾಯುಕ್ತ ಎಸ್ಪಿ ಮಧುಕರ ಶೆಟ್ಟಿ ಅವರು ರಜೆಯಲ್ಲಿರುವ ಕಾರಣ, ಅವರ ಬದಲಿಗೆ ರಂಗಸ್ವಾಮಿ ಅವರ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ ಎಂದು ಹೇಳಿದ್ದಾರೆ.

ಜಸ್ಟೀಸ್ ಲಾಯರ್ಸ್ ಫೋರಂ ವಕೀಲರಾದ ಸಿರಾಜಿನ್ ಬಾಷಾ ದಾಖಲಿಸಿದ್ದ ಮೊದಲ ಖಾಸಗಿ ದೂರಿನ ಪ್ರಾಥಮಿಕ ವಿಚಾರಣೆ ಪೂರ್ಣಗೊಳಿಸಿದ್ದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಬಿ.ಹಿಪ್ಪರಗಿ, ಯಡಿಯೂರಪ್ಪ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮಾರ್ಚ್ 24ರಂದು ಆದೇಶ ನೀಡಿದ್ದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಡೆದ ಎರಡು ಡಿನೋಟಿಫಿಕೇಷನ್ ಮತ್ತು ಸಾರ್ವಜನಿಕ ರಸ್ತೆಯನ್ನು ನಿವೇಶನವನ್ನಾಗಿ ಪರಿವರ್ತಿಸಿರುವ ಪ್ರಕರಣಗಳನ್ನು ಮುಖ್ಯಮಂತ್ರಿ ಮತ್ತು ಕುಟುಂಬದ ವಿರುದ್ಧದ ಮೊದಲ ಖಾಸಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಇವನ್ನೂ ಓದಿ