ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಮತ್ತಷ್ಟು ನಿರಾಳ; ಎಲ್ಲಾ ವಿಚಾರಣೆಗೂ ಹೈಕೋರ್ಟ್ ತಡೆ (BJP | Yeddyurapap | High court | Sohan kumar | Land scam | lokayuktha court)
WD
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಭೂ ಹಗರಣಗಳ ಎಲ್ಲಾ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡುವ ಮೂಲಕ ಮುಖ್ಯಮಂತ್ರಿಗಳು ಮತ್ತಷ್ಟು ನಿರಾಳರಾದಂತಾಗಿದೆ.

ಭೂ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕುಟುಂಬದ ವಿರುದ್ಧದ ಉಳಿದ ನಾಲ್ಕು ಪ್ರಕರಣಗಳ ವಿಚಾರಣೆಗೆ ತಡೆ ನೀಡುವಂತೆ ಸಿಎಂ ಅಳಿಯ ಸೋಹನ್ ಕುಮಾರ್ 2 ಅರ್ಜಿ, ಧವಳಗಿರಿ ಪ್ರಾಪರ್ಟಿಸ್ 1 ಹಾಗೂ ಅಕ್ಕಮಹಾದೇವಿ ಎಂಬವರು 1 ಅರ್ಜಿಯನ್ನು ಗುರುವಾರ ಹೈಕೋರ್ಟ್‌ಗೆ ಸಲ್ಲಿಸಿದ್ದರು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಮುಖ್ಯಮಂತ್ರಿ ವಿರುದ್ಧದ ಎಲ್ಲಾ ಪ್ರಕರಣಗಳ ತನಿಖೆಗೂ ತಡೆಯಾಜ್ಞೆ ನೀಡಿದೆ. ಈಗಾಗಲೇ ಸಿಎಂ ವಿರುದ್ಧದ 1 ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

ಲಾಯರ್ಸ್ ಫೋರಂನ ಸಿರಾಜಿನ್ ಬಾಷಾ ಹಾಗೂ ಬಾಲರಾಜ್ ಅವರು ಭೂ ಹಗರಣದ ಕುರಿತಂತೆ ರಾಜ್ಯಪಾಲರ ಅನುಮತಿಯೊಂದಿಗೆ ಐದು ಖಾಸಗಿ ದೂರನ್ನು ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಸಲ್ಲಿಸಿದ್ದರು. ದೂರಿನ ವಿಚಾರಣೆ, ಸಾಕ್ಷಿಗಳ ಹೇಳಿಕೆ ಪಡೆದ ಲೋಕಾಯುಕ್ತ ಕೋರ್ಟ್, ಪ್ರಕರಣದ ವಿಚಾರಣೆ ನಡೆಸಿ ವರದಿ ಕೊಡುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿತ್ತು.

ಏತನ್ಮಧ್ಯೆ ಲೋಕಾಯುಕ್ತ ಕೋರ್ಟ್ ಆದೇಶ ಪ್ರಶ್ನಿಸಿ ಕಳೆದ ಎರಡು ದಿನಗಳ ಹಿಂದಷ್ಟೇ ಸಿಎಂ ಅಳಿಯ ಸೋಹನ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಮೊದಲ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ, ಉಳಿದ ನಾಲ್ಕು ಪ್ರಕರಣಗಳ ವಿಚಾರಣೆಗೂ ತಡೆ ನೀಡಬೇಕೆಂದು ನಿನ್ನೆ ಮತ್ತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅಂತೂ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತಷ್ಟು ರಿಲೀಫ್ ಆಗಿದ್ದರೆ, ಹೈಕೋರ್ಟ್ ತಡೆಯಾಜ್ಞೆಯಿಂದಾಗಿ ದೂರುದಾರರಾದ ಸಿರಾಜಿನ್ ಬಾಷಾ ಮತ್ತು ಬಾಲರಾಜ್ ಅವರಿಗೆ ಹಿನ್ನಡೆಯಾದಂತಾಗಿದೆ.

ಈ ಸಂದರ್ಭದಲ್ಲಿ ಡಿನೋಟಿಪಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರ್.ಅಶೋಕ್ ಕೂಡ ಹೈಕೋರ್ಟ್ ಮೆಟ್ಟಿಲೇರಿದ್ದು, ಅವರ ವಿಚಾರಣೆಗೂ ಏಪ್ರಿಲ್ 5ರವರವಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಇವನ್ನೂ ಓದಿ