ಮತದಾರರ ವಿಶ್ವಾಸನ್ನು ಧಿಕ್ಕರಿಸಿ ಹಣಕ್ಕಾಗಿ ತಮ್ಮನ್ನು ತಾವು ಮಾರಿಕೊಂಡ ಶಾಸಕರಿಗೆ ತಕ್ಕಪಾಠ ಕಲಿಸುವಂತೆ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ದ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಡಿಕೆಶಿ, ಕಾಂಗ್ರೆಸ್ ಪಕ್ಷದಿಂದ ಗೆದ್ದು ಅಧಿಕಾರ ಅನುಭವಿಸಿದ ಸಿ.ಪಿ ಯೋಗೇಶ್ವರ್ ಹಣದಾಸೆಗಾಗಿ ಬಿಜೆಪಿಗೆ ಸೇರಿದ್ದಾರೆ. ಜೆಡಿಸ್ ಅಭ್ಯರ್ಥಿ ಅಶ್ವಥ್ ಕೂಡಾ ಹಣಕ್ಕಾಗಿ ಮಾರಿಕೊಂಡು ಜನತೆಗೆ ದ್ರೋಹ ಬಗೆದಿದ್ದಾರೆ. ಇಂತಹ ವ್ಯಕ್ತಿಗಳಿಗೆ ತಕ್ಕಪಾಠ ಕಲಿಸಿ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಘಉನಂದನ್ ಪ್ರಾಮಾಣಿಕರಾಗಿದ್ದರಿಂದ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಬಿಜೆಪಿ ಪಕ್ಷ 10 ದಿನಗಳ ಅವಧಿಯಲ್ಲಿ 30 ಕೋಟಿ ರೂಪಾಯಿಗಳನ್ನು ಹಂಚಲು ಸಂಚು ರೂಪಿಸಿದೆ. ಮತದಾರರು ಬಿಜೆಪಿ ನೀಡಿದ ಹಣವನ್ನು ಪಡೆದುಕೊಂಡು ಕಾಂಗ್ರೆಸ್‌ಗೆ ಮತ ನೀಡಿ ಎಂದರು.