ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ಆಸ್ತಿ 5 ಸಾವಿರ ಕೋಟಿ ರೂಪಾಯಿ: ಸಿದ್ದು (yediyurappa | Corruptio | Siddaramayya)
ಭ್ರಷ್ಟಾಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮೀರಿಸಲು ಯಾರಿಗೂ ಸಾಧ್ಯವಿಲ್ಲ. ಅವರ ಅಕ್ರಮ ಆಸ್ತಿ 5 ಸಾವಿರ ಕೋಟಿ ರೂಪಾಯಿಗಳಿಗೂ ಮೀರಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದೇವೆಂದ್ರಪ್ಪ ಅವರ ಪರವಾಗಿ ಪ್ರಚಾರ ನಡೆಸಿದ ಅವರು, ನಾನು ಮತ್ತು ಯಡಿಯೂರಪ್ಪ ಒಂದೇ ಸಮಯದಲ್ಲಿ ರಾಜಕೀಯವನ್ನು ಪ್ರವೇಶಿಸಿದ್ದೇವೆ. ನನ್ನ ಮತ್ತು ಯಡಿಯೂರಪ್ಪನವರ ಆಸ್ತಿಯ ಬಗ್ಗೆ ತನಿಖೆಯಾಗಲಿ ಎಂದು ಸವಾಲೆಸೆದರು.

ಯಡಿಯೂರಪ್ಪ ಮತ್ತು ಅವರ ಕುಟುಂಬ ಭಾರಿ ಪ್ರಮಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ. ಬಿಜೆಪಿ ಸರಕಾರ ಅಧಿಕಾರದಲ್ಲಿರುವವರೆಗೆ ರಾಜ್ಯಕ್ಕೆ ಒಳ್ಳೆಯದಾಗುವುದಿಲ್ಲ. ಸರಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ ಎಂದರು.

ಬಿಜೆಪಿಯಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರೆಯಲು ಸಾಧ್ಯವಿಲ್ಲ. ಹಿಂದುಳಿದ ವರ್ಗಗಳಿಗೆ ಸರಕಾರ ಅನ್ಯಾಯ ಮಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಪ್ರಜಾಪ್ರಭುತ್ವವನ್ನು ಬೆಂಬಲಿಸಿ ಎಂದು ಕರೆನೀಡಿದರು.

ಎಲ್ಲ ಸಂದರ್ಭಗಳಲ್ಲಿ ಬಿಜೆಪಿ ಹಣದ ಪ್ರಭಾವ ನಡೆಯುವುದಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಇವನ್ನೂ ಓದಿ