ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಆಡಳಿತದಿಂದ ರಾಜ್ಯಕ್ಕೆ ಕೆಟ್ಟ ಹೆಸರು: ಕಾಂಗ್ರೆಸ್ (BJP | Yeddyurappa | Congress | SM Krishna | bypoll | Mallikarjun Kharge)
ಭ್ರಷ್ಟಾಚಾರದಲ್ಲಿ ಮುಳುಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ಕ್ರಮ ಕೈಗೊಳ್ಳದೆ ಶಹಬ್ಬಾಸ್ ಗಿರಿ ನೀಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ಬಿಜೆಪಿ ಹಗರಣದಿಂದಾಗಿ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿದೆ ಎಂದು ಆರೋಪಿಸಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ, ಕಾರ್ಮಿಕ ಸಚಿವ ಎಂ.ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಈ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣ, ಜಗಳೂರು ಹಾಗೂ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ಮೂರು ಕ್ಷೇತ್ರಗಳಲ್ಲಿ ಮತ ಪ್ರಚಾರ ಬಿರುಸುಗೊಂಡಿದೆ.

ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಖರೀದಿಸಿ, ರಾಜ್ಯದಲ್ಲಿ ಉಪ ಚುನಾವಣೆ ನಡೆಯುವಂತಹ ಸ್ಥಿತಿಯನ್ನು ಬಿಜೆಪಿ ಮಾಡುತ್ತಿದೆ. ಹಾಗಾಗಿ ಮತದಾರರು ಆಪರೇಶನ್ ಕಮಲದಂತಹ ಹೀನ ಸಂಸ್ಕೃತಿಯನ್ನು ಹುಟ್ಟುಹಾಕಿದ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕೆಂದು ಕಾಂಗ್ರೆಸ್ ಮುಖಂಡರು ಮನವಿ ಮಾಡಿಕೊಂಡರು.

ಅಷ್ಟೇ ಅಲ್ಲ ಸರಕಾರದಲ್ಲಿನ ಹಲವು ಸಚಿವರು, ಮುಖ್ಯಮಂತ್ರಿಗಳ ಭ್ರಷ್ಟಾಚಾರದಿಂದಾಗಿ ಕರ್ನಾಟಕ ಭ್ರಷ್ಟ ರಾಜ್ಯ ಎಂಬ ಹಣೆಪಟ್ಟಿ ಕಟ್ಟಿಕೊಳ್ಳುವಂತಾಗಿದೆ. ಹಾಗಾಗಿ ಬಿಜೆಪಿಗೆ ಸೂಕ್ತ ಚಿಕಿತ್ಸೆ ನೀಡಬೇಕಾಗಿದೆ. ಅದನ್ನು ಉಪ ಚುನಾವಣೆ ನಡೆಯುವ ಕ್ಷೇತ್ರದಲ್ಲಿನ ಮತದಾರರು ತಕ್ಕ ಉತ್ತರ ನೀಡಬೇಕು ಎಂದು ಸಚಿವ ಎಸ್.ಎಂ.ಕೃಷ್ಣ ಹೇಳಿದರು.

ಭ್ರಷ್ಟಾಚಾರದಲ್ಲಿಯೇ ಮುಳುಗಿರುವ ಬಿಜೆಪಿ ಪಕ್ಷ ಕಾಂಗ್ರೆಸ್‌ಗೆ ನೈತಿಕತೆಯ ಪಾಠ ಹೇಳುತ್ತಿದೆ ಎಂದು ಕಿಡಿಕಾರಿದ ಖರ್ಗೆ, ಭ್ರಷ್ಟಾಚಾರ ನಡೆಸಿಯೂ ಆರೋಪ ಎದುರಿಸುತ್ತಿರುವ ಯಡಿಯೂರಪ್ಪ ಮುಖ್ಯಮಂತ್ರಿ ಗದ್ದುಗೆಯಲ್ಲಿ ಮುಂದುವರಿಯುತ್ತಿರುವುದು ರಾಜ್ಯಕ್ಕೆ ಅವಮಾನ ಎಂದರು.
ಇವನ್ನೂ ಓದಿ