ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಜಾರೆ ಹೋರಾಟಕ್ಕೆ ನೋ ಕಮೆಂಟ್...ಸಿಎಂ, ಕಾರ್ನಾಡ್! (Anna Hazare | anti-corruption movement | Lokpal Bill | Girish karnad,)
PR
ಜನಲೋಕಪಾಲ್ ಮಸೂದೆ ಜಾರಿಗೆ ಆಗ್ರಹಿಸಿ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಬಗ್ಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದರೆ, ಮತ್ತೊಂದೆಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿ ಜಾರಿಕೊಂಡಿದ್ದಾರೆ.

ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ಹೋರಾಟಕ್ಕೆ ದೇಶಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಏತನ್ಮಧ್ಯೆ ಭ್ರಷ್ಟಾಚಾರದ ನಿಗ್ರಹಕ್ಕೆ ಅಣ್ಣಾ ಹಜಾರೆ ಅವರ ಹೋರಾಟದ ಬಗ್ಗೆ ಏನು ಹೇಳುತ್ತೀರಿ ಎಂದು ಸುದ್ದಿಗಾರರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದಾಗ, ನೋ...ಕಮೆಂಟ್...ಆ ಬಗ್ಗೆ ನಾನು ಏನೂ ಹೇಳಲು ಇಚ್ಛಿಸುವುದಿಲ್ಲ ಎಂದು ಹೇಳಿ ಹೊರಟು ಹೋದ ಪ್ರಸಂಗ ಗುರುವಾರ ನಡೆಯಿತು.

ಹಜಾರೆ ಅವರ ಹೋರಾಟಕ್ಕೆ ಗೃಹ ಸಚಿವ ಆರ್.ಅಶೋಕ್, ಸಂಸದ ಅನಂತ್ ಕುಮಾರ್, ಶಾಸಕ ಹ್ಯಾರಿಸ್ ಸೇರಿದಂತೆ ರಾಜ್ಯಾದ್ಯಂತ ಬೆಂಬಲ ವ್ಯಕ್ತಪಡಿಸಿದ್ದಾರೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿರುವ ಅಣ್ಣಾ ಹಜಾರೆ ಅವರ ನಿರ್ಧಾರ ನಿಜಕ್ಕೂ ಶ್ಲಾಘನೀಯ. ಬಿಜೆಪಿ ಕೂಡ ಅದನ್ನ ಬೆಂಬಲಿಸುತ್ತದೆ ಎಂದು ಕಾನೂನು ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ರಾಜಕೀಯದ ಬಗ್ಗೆ ಪ್ರತಿಕ್ರಿಯೆ ನೀಡಲ್ಲ-ಗಿರೀಶ್ ಕಾರ್ನಾಡ್!
ಕಳೆದ ಮೂರು ದಿನಗಳಿಂದ ಜನಲೋಕಪಾಲ್ ಮಸೂದೆ ಜಾರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಅಣ್ಣಾ ಹಜಾರೆ ಹೋರಾಟದ ಬಗ್ಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗಲೂ, ಇಲ್ಲ ನಾನು ಆ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ನೋ...ರಾಜಕೀಯದ ಬಗ್ಗೆ ಏನೂ ಹೇಳಲ್ಲ ಎಂದು ಅಚ್ಚರಿ ಮೂಡಿಸಿದರು. ಆದರೂ ಸರ್...ಇದು ರಾಜಕೀಯ ಅಲ್ಲ, ರಾಜಕೀಯೇತರವಾಗಿ ಹಜಾರೆ ಭ್ರಷ್ಟಾಚಾರದ ವಿರುದ್ಧ ನಡೆಸುತ್ತಿರುವ ಹೋರಾಟ ಎಂದರು ಕೂಡ...ಆ ಮಾತನ್ನು ಕಿವಿಗೆ ಹಾಕಿಕೊಳ್ಳದ ಕಾರ್ನಾಡ್...ಇಲ್ಲ...ರಾಜಕೀಯದ ಬಗ್ಗೆ ಏನೂ ಹೇಳಲ್ಲ ಎಂದು ತಮ್ಮ ಪಾಡಿಗೆ ಹೊರಟು ಹೋಗಿದ್ದರು!
ಇವನ್ನೂ ಓದಿ