ಲೋಕಪಾಲ್ ಮಸೂದೆ ರಚನಾ ಸಮಿತಿಯ ಸದಸ್ಯರಾಗುವಂತೆ ಸರಕಾರದ ನೀಡಿರುವ ಅಹ್ವಾನವನ್ನು ಒಪ್ಪಿಕೊಳ್ಳುವುದಾಗಿ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ ಹೆಗ್ಡೆ, ಲೋಕಪಾಲ್ ಮಸೂದೆ ಸಮಿತಿಯಲ್ಲಿ ಸದಸ್ಯನಾಗಿ ಕಾರ್ಯನಿರ್ವಹಿಸಲು ಸಿದ್ಧವಾಗಿದ್ದೇನೆ. ಲೋಕಪಾಲ್ ಅಧಿಕಾರಿಗಳಿಗೆ ಪೊಲೀಸರಿಗೆ ನೀಡಿದಂತಹ ಅಧಿಕಾರಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ.
ಅಪೆಕ್ಸ್ ನ್ಯಾಯಾಲಯದ ಮಾಜಿ ನ್ಯಾಯಮೂರ್ತಿಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಗಳಿಗೆ ಹೆಸರುವಾಸಿಯಾದ ಸಂತೋಷ್ ಹೆಗ್ಡೆ, ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ವರ್ಮಾ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಜಂಟಿ ಸಮಿತಿಯ ಅದ್ಯಕ್ಷ ಸ್ಥಾನಕ್ಕೆ ನಾನು ಸೂಕ್ತ ವ್ಯಕ್ತಿ ಎಂದು ಭಾವಿಸಿಲ್ಲ. ಈ ಹಿಂದೆ ಸಿದ್ಧಪಡಿಸಲಾದ ಲೋಕಪಾಲ್ ಮಸೂದೆಯಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಸಂತೋಷ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.