ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಫ್ತು ನಿಷೇಧ : ಸುಪ್ರೀಂ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಕೆ (Export of iron ore | Karnataka Government | Supreme Court)
PTI
ಕಬ್ಬಿಣ ಅದಿರು ರಫ್ತಿಗೆ ಸರಕಾರ ಹೇರಿದ ನಿಷೇದವನ್ನು ರದ್ದುಗೊಳಿಸಿದ ಸರ್ವೋಚ್ಚ ನ್ಯಾಯಾಲಯದ ಆದೇಶದ ವಿರುದ್ಧ, ಶೀಘ್ರದಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಅನಧಿಕೃತ ಗಣಿಗಾರಿಕೆ ಹಾಗೂ ಅನಧಿಕತ ಕಬ್ಬಿಣ ಅದಿರು ರಫ್ತಿಗೆ ಕಡಿವಾಣ ಹಾಕಲು ರಾಜ್ಯ ಸರಕಾರ ನಿಷೇಧ ಹೇರಿದೆ. ಇದೀಗ, ಸರ್ವೋಚ್ಚ ನ್ಯಾಯಾಲಯದ ನೀಡಿದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಅನಧಿಕೃತ ಗಣಿಗಾರಿಕೆ ಹಾಗೂ ಅನಧಿಕೃತ ಕಬ್ಬಿಣ ಅದಿರು ರಫ್ತು ವಹಿವಾಟಿನಲ್ಲಿ ಹೆಚ್ಚಳವಾಗಿದ್ದರಿಂದ, ಸರಕಾರ ಕಬ್ಬಿಣ ಅದಿರು ರಫ್ತಿಗೆ ನಿಷೇದ ಹೇರಿರುವ ಕ್ರಮವನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಮನದಟ್ಟು ಮಾಡಿಕೊಡಲಾಗುವುದು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಕಳೆದ ಜುಲೈ 2010ರಲ್ಲಿ ಕಬ್ಬಿಣ ಅದಿರು ರಫ್ತಿಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದರು. ಏಪ್ರಿಲ್ 5 ರಂದು ಸರ್ವೋಚ್ಚ ನ್ಯಾಯಾಲಯ ಕಬ್ಬಿಣ ಅದಿರು ರಫ್ತಿಗೆ ಹೇರಿದ ನಿಷೇಧವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಆರ್‌.ವಿ ರವೀಂದ್ರನ್ ಮತ್ತು ಎ.ಕೆ.ಪಟ್ನಾಯಕ್ ನೇತೃತ್ವದ ನ್ಯಾಯಪೀಠ, ಅನಧಿಕೃತ ಗಣಿಗಾರಿಕೆ ತಡೆಗೆ ಕರ್ನಾಟಕ ಲೋಕಾಯುಕ್ತರ ಸಲಹೆಗಳನ್ನು ಪರಿಗಣಿಸುವಂತೆ ರಾಜ್ಯ ಸರಕಾರಕ್ಕೆ ಸಲಹೆ ನೀಡಿದೆ.

ಅನಧಿಕೃತ ಗಣಿಗಾರಿಕೆ ಅಧ್ಯಯನ ನಡೆಸಲು ಬಳ್ಳಾರಿಗೆ ಆಗಮಿಸಿದ ಸಿಇಸಿ ಸಮಿತಿಗೆ ರಾಜ್ಯದ ಅಧಿಕಾರಿಗಳಿಂದ ಸಹಕಾರ ದೊರೆಯಲಿಲ್ಲ ಎನ್ನುವ ಮಾಧ್ಯಮ ವರದಿಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಳ್ಳಿಹಾಕಿದ್ದಾರೆ.
ಇವನ್ನೂ ಓದಿ