ಭ್ರಷ್ಟಾಚಾರ ವಿರೋಧಿ ಜನಲೋಕಪಾಲ ಮಸೂದೆ ವ್ಯಾಪ್ತಿಗೆ ಪ್ರಧಾನ ಮಂತ್ರಿಗಳನ್ನೂ ತರಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಕರ್ನಾಟಕ ಲೋಕಾಯುಕ್ತ ಮಸೂದೆಯ ವ್ಯಾಪ್ತಿಗೆ ಮುಖ್ಯಮಂತ್ರಿಗಳು ಬರುವ ಹಾಗೆಯೇ ಲೋಕಪಾಲ ಮಸೂದೆ ವ್ಯಾಪ್ತಿಗೆ ಪ್ರಧಾನಮಂತ್ರಿಗಳೂ ಬರಬೇಕೆಂದು ಹೆಗ್ಡೆ ತಿಳಿಸಿದ್ದಾರೆ.
ಕರ್ನಾಟಕದ ಲೋಕಾಯುಕ್ತ ಮಸೂದೆ ರಾಷ್ಟ್ರದಲ್ಲಿಯ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಸಮರ್ಥವಾಗಿದೆ.ಇದಕ್ಕೆ ಒಂದೆರೆಡು ತಿದ್ದುಪಡಿಗಳನ್ನು ತಂದಲ್ಲಿ ಅದು ನೂರಕ್ಕೆ ನೂರರಷ್ಟು ಶಕ್ತಿಶಾಲಿಯಾಗುತ್ತದೆ. ಇದೇ ಮಾದರಿಯಲ್ಲಿ ಲೋಕಪಾಲ ಮಸೂದೆ ಕೂಡಾ ಜಾರಿಯಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಪ್ರಕರಣಗಳ ತನಿಖೆ ಮಾಡುವ ಲೋಕಾಯುಕ್ತಕ್ಕೆ ಭ್ರಷ್ಟರ ವಿರುದ್ಧ ಕ್ರಮ ತೆಗೆದುಕೊಳ್ಳುವ ಅಧಿಕರ ಕೂಡಾ ಇರಲೇ ಬೇಕು.ರಾಜಕೀಯ ಒತ್ತಡಗಳಿಂದ ಕಾರ್ಯನಿರ್ವಹಿಸುವಂತಾಗಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.