ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ದೇಶದ ಅಕ್ರಮ ಗಣಿಗಾರಿಕೆಯಲ್ಲಿ ರಾಜ್ಯವೇ ನಂ. 1: ಭಾರದ್ವಾಜ್ (H.R.Bharadwaj | Illigal mining | Karnataka government)
EVENT
ದೇಶದಲ್ಲಿಯೇ ಅಕ್ರಮ ಗಣಿಗಾರಿಕೆಯಲ್ಲಿ ಕರ್ನಾಟಕ ರಾಜ್ಯ ನಂಬರ್ ಒನ್ ಸ್ಥಾನ ಪಡೆದಿದೆ ಎಂದು ರಾಜ್ಯಪಾಲ ಎಚ್‌.ಆರ್.ಭಾರದ್ವಾಜ್ ಹೇಳಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಅಕ್ರಮ ಗಣಿಗಾರಿಕೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವುದರ ಬಗ್ಗೆ ಯಾವುದೇ ರೀತಿಯ ಸಂಶಯ ಬೇಡ ಎಂದು ಅಸಮಧಾನ ವ್ಯಕ್ತಪಡಿಸಿದರು.

ಕಳೆದ ಕೆಲ ವರ್ಷಗಳಿಂದ ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ರಾಜ್ಯ ಸರಕಾರದಿಂದ ಅಕ್ರಮ ಗಣಿಗಾರಿಕೆ ಕುರಿತಂತೆ ಯಾವುದೇ ವರದಿ ಬಂದಿಲ್ಲದಿರುವುದು ಶೋಚನೀಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅವ್ಯಾಹತವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸಿಇಸಿ ಸಮಿತಿ ಕಳೆದ ವಾರ ಸರ್ವೋಚ್ಚ ನ್ಯಾಯಾಲಯಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ.

ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟಲು ರಾಜ್ಯ ಸರಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿಯನ್ನು ನೀಡುವಂತೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಇವನ್ನೂ ಓದಿ