ನಂ1 ಭ್ರಷ್ಟ ಸರಕಾರ ಕಿತ್ತೊಗೆಯಿರಿ: ಬಿಜಾಪುರದಲ್ಲಿ ರಾಹುಲ್
ಬಿಜಾಪುರ:, ಬುಧವಾರ, 20 ಏಪ್ರಿಲ್ 2011( 14:58 IST )
ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಸರಕಾರವನ್ನು ಕಿತ್ತೊಗೆಯುವಂತೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಒತ್ತಾಯಿಸಿದರು.
ನಗರದಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ರಾಹುಲ್ ಮಾತನಾಡಿ, ಅಕ್ರಮ ಗಣಿಗಾರಿಕೆ ಸೇರಿದಂತೆ ಅವ್ಯವಹಾರಗಳಲ್ಲಿ ಮುಳುಗಿರುವ ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನ ಗಳಿಸಿದ್ದು, ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ಆಪಾದಿಸಿದರು.
ಒಂದು ದಿನದ ರಾಜ್ಯ ಪ್ರವಾಸಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಬರಮಾಡಿಕೊಂಡರು.
ಬುಧವಾರ ಮಧ್ಯಾಹ್ನ ರಾಹುಲ್ ಉಡುಪಿಗೆ ಆಗಮಿಸಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ನೆಚ್ಚಿನ ನಾಯಕನನ್ನು ಕಾಣಲು ಯುವಕರು ಕಾತುರರಾಗಿದ್ದಾರೆ.
ಉಡುಪಿ ಭೇಟಿಯ ನಂತರ ಬೆಂಗಳೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ, ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕಳೆದ ಬಾರಿ ಚುನಾವಣೆಯಲ್ಲಿ ಸೋತ ಪಕ್ಷದ ಅಭ್ಯರ್ಥಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.