ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಂತೋಷ್ ಹೆಗ್ಡೆ ರಾಜೀನಾಮೆ ನೀಡದಂತೆ ಬೆಂಗಳೂರಿಗರ ಒತ್ತಾಯ (Santosh Hegde | Lokayukta | Bangaloreans | Lokpal Bill draft panel | Digvijay Singh)
PTI
ಕಾಂಗ್ರೆಸ್ ಪಕ್ಷದ ನಾಯಕ ದಿಗ್ವಿಜಯ್ ಸಿಂಗ್ ಆರೋಪಗಳಿಂದ ಮನನೊಂದು ಲೋಕಪಾಲ ಮಸೂದೆ ಕರಡು ಸಮಿತಿಗೆ ರಾಜೀನಾಮೆ ನೀಡದಂತೆ, ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರಿಗೆ ಬೆಂಗಳೂರಿನ ನಾಗರಿಕರು ಒತ್ತಡ ಹೇರುತ್ತಿದ್ದಾರೆ.

ಹೆಗ್ಡೆ ನಿವಾಸದೆದುರು ಪ್ರತಿಭಟನೆ ನಡೆಸಿದ ನಾಗರಿಕರು, ' ನಾವು ನಿಮ್ಮೊಂದಿಗಿದ್ದೆವೆ ದಯವಿಟ್ಟು ಸಮಿತಿಯಲ್ಲಿ ಮುಂದುವರಿಯಿರಿ' ಎಂದು ಹಿರಿಯ ನಾಗರಿಕರು ಸೇರಿದಂತೆ ನೂರಾರು ಸಂಖ್ಯೆಯಲ್ಲಿದ್ದ ಜನರು ರಾಜೀನಾಮೆ ನೀಡದಂತೆ ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ.

ಸಂತೋಷ್ ಹೆಗ್ಡೆಯವರು ರಾಜೀನಾಮೆ ನೀಡುವ ಕುರಿತಂತೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಸಮಿತಿಯ ಪದಾಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದು ಹೆಗ್ಡೆ ನಿವಾಸದೆದುರು ಸೇರಿದ್ದ ನಾಗರಿಕರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹೆಗ್ಡೆಯವರನ್ನು ಹೊರತುಪಡಿಸಿ, ಸಮಿತಿಯಲ್ಲಿ ನಾಗರಿಕ ಸಮಿತಿ ಸದಸ್ಯರಾದ ಶಾಂತಿ ಭೂಷಣ್ ಮತ್ತು ಅವರ ಮಗ ಪ್ರಶಾಂತ್ ಭೂಷಣ್ ಸೇರಿದಂತೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮತ್ತು ಅರವಿಂದ್ ಕೇಜ್ರಿವಾಲ್ ಸ್ಥಾನಪಡೆದಿದ್ದಾರೆ.

ಶಾಂತಿ ಭೂಷಣ್ ಮತ್ತು ಪ್ರಶಾಂತ್ ಭೂಷಣ್ ಸಿಡಿ ವಿವಾದವನ್ನು ಎದುರಿಸುತ್ತಿದ್ದು, ಉತ್ತರಪ್ರದೇಶದಲ್ಲಿ ಭೂ ಹಂಚಿಕೆ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಮೂರ್ತಿಯಾದ ಸಂತೋಷ್ ಹೆಗ್ಡೆ, ಕಾಂಗ್ರೆಸ್ ನಾಯಕರ ಆರೋಪಗಳಿಂದ ಬೇಸರವಾಗಿದ್ದರಿಂದ ಸಮಿತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತಂತೆ ಯೋಚಿಸುತ್ತಿರುವುದಾಗಿ ಹೇಳಿಕೆ ನೀಡಿದ್ದರು.

ಮಧ್ಯಪ್ರದೇಶ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ದಿಗ್ವಿಜಯ್ ಸಿಂಗ್, ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಯುವಲ್ಲಿ ಹೆಗ್ಡೆಯವರು ವಿಫಲವಾಗಿದ್ದಾರೆ ಎಂದು ಆರೋಪಿಸಿದ್ದರು.
ಇವನ್ನೂ ಓದಿ