ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆಯಿಲ್ಲ: ಯಡಿಯೂರಪ್ಪ (B S Yeddyurappa | Cabinet expansion | BDA | Infosys)
EVENT
ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆಗಳಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಉಪ ಚುನಾವಣೆಗಳ ನಂತರ ಸಚಿವ ಸಂಪುಟವನ್ನು ವಿಸ್ತರಿಸುವುದಾಗಿ ಕಳೆದು ತಿಂಗಳು ಹೇಳಿಕೆ ನೀಡಿದ್ದ ಸಿಎಂ, ಇದೀಗ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆಯಿಲ್ಲ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಆಂತರಿಕ ವಿರೋಧಿಗಳ ಬಲವನ್ನು ಕುಗ್ಗಿಸಲು, ಕಳೆದ ಕೆಲವು ತಿಂಗಳುಗಳಿಂದ ಸಚಿವ ಸಂಪುಟ ವಿಸ್ತರಿಸುವುದಾಗಿ ಹಲವು ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳು ಹೇಳಿಕೆ ನೀಡಿದ್ದರು.

ಪುತ್ರ ಹಾಗೂ ಸಂಸದ ರಾಘವೇಂದ್ರ ಅವರಿಗೆ ನೀಡಲಾದ ನಿವೇಶನವನ್ನು, ಆರೋಪಗಳ ಹಿನ್ನೆಲೆಯಲ್ಲಿ
ಬೆಂಗಳೂರು ಅಭಿವೃದ್ಧಿ ಪ್ರಾಧೀಕಾರಕ್ಕೆ ಹಿಂದಿರುಗಿಸಲಾಗಿದೆ. ರಾಘವೇಂದ್ರ ಅವರಿಗೆ ನೀಡಲಾಗಿದ್ದ ಬಿಡಿಎ ನಿವೇಶನದಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ ಎನ್ನುವ ವರದಿಗಳು ಆಧಾರರಹಿತವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ರಾಘವೇಂದ್ರ ಅವರಿಗೆ ನೀಡಲಾದ ನಿವೇಶನವನ್ನು ಹಿಂಪಡೆದು ಬಿಜಿಪಿ ನಾಯಕ ಬಸವರಾಜ್ ಪಾಟೀಲ್ ಸೇಡಂ ಅವರಿಗೆ ನೀಡಲಾಗಿದೆ. ಬಿಜೆಪಿ ಎಂಎಲ್‌ಸಿ ಭಾರ್ತಿ ಶೆಟ್ಟಿಯವರ ನಿವೇಶನದಲ್ಲಿ ಕಟ್ಟಡ ಕಾಮಗಾರಿ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ದೇಶದ ಸಾಫ್ಟ್‌ವೇರ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಇನ್ಫೋಸಿಸ್ ಸಂಸ್ಥೆ ನಿರ್ಮಿಸಲಾದ 100 ಮನೆಗಳ ಹಕ್ಕುಪತ್ರಗಳನ್ನು ವಿತರಿಸಿದ ಸಿಎಂ ಯಡಿಯೂರಪ್ಪ, ಸಂತ್ರಸ್ಥ ಜಿಲ್ಲೆಗಳಾದ ಗುಲ್ಬರ್ಗಾ, ರಾಯಚೂರು, ಧಾರವಾಡ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 1714 ಮನೆಗಳನ್ನು ಇನ್ಫೋಸಿಸ್ ಸಂಸ್ಥೆ ನಿರ್ಮಿಸುತ್ತಿದೆ ಎಂದು ತಿಳಿಸಿದ್ದಾರೆ.

ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮನೆಗಳ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದ್ದು, ಮೇ ತಿಂಗಳಲ್ಲಿ ಸಂತ್ರಸ್ಥರಿಗೆ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಇವನ್ನೂ ಓದಿ