ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಕುರ್ಚಿ ತ್ಯಜಿಸಲಿ, ಇಲ್ಲಾಂದ್ರೆ ಪ್ರತಿಭಟನೆ ಮಾಡ್ತೇವೆ: ಸಿದ್ದು (B S Yeddyurappa | Siddaramaiah | Supreme Court | Bellary | illegal mining)
WD
ಅಕ್ರಮ ಗಣಿಗಾರಿಕೆ ಕುರಿತಂತೆ ಬಳ್ಳಾರಿ ವಿಭಾಗದಲ್ಲಿನ 19 ಗಣಿ ಕಂಪನಿಗಳ ಕಾರ್ಯಚಟುವಟಿಕೆ ಹಾಗೂ ಅದಿರು ಸಾಗಣೆಯನ್ನು ನಿಲ್ಲಿಸಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಗದ್ದುಗೆಯಿಂದ ಕೆಳಗಿಳಿಯಬೇಕು. ಇಲ್ಲದಿದ್ದರೆ ಕಾಂಗ್ರೆಸ್ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಶಿವಮೊಗ್ಗದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಖಾತೆಯ ಜವಾಬ್ದಾರಿಯನ್ನು ಹೊಂದಿದ್ದಾರೆ. ಆ ನೆಲೆಯಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆ ಬಳ್ಳಾರಿಯಲ್ಲಿ ನಡೆದಿರುವುದು ಸಾಬೀತಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ಬಳ್ಳಾರಿಯಲ್ಲಿ 19 ಗಣಿ ಕಂಪನಿಗಳು ತಮ್ಮ ಕಾರ್ಯಚಟುವಟಿಕೆ ನಿಲ್ಲಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರವೂ ಯಡಿಯೂರಪ್ಪ ಕುರ್ಚಿಯಲ್ಲಿ ಗಟ್ಟಿಯಾಗಿ ಕುಳಿತುಕೊಂಡದ್ದೇ ಆದಲ್ಲಿ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಳ್ಳಲಿದೆ ಎಂದರು.

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಇಲ್ಲವೇ ಇಲ್ಲ ಎಂದು ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಆದರೆ ಇದೀಗ ಸುಪ್ರೀಂಕೋರ್ಟ್ ಆದೇಶದಿಂದ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಬಯಲಾಗಿದೆ. ಅಷ್ಟೇ ಅಲ್ಲ ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಹಾಗಾಗಿ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಪ್ರತಿಪಾದಿಸಿದರು.

ಅಕ್ರಣ ಗಣಿಗಾರಿಕೆ ಮಾಡುವವರು ಕೇವಲ ನೈಸರ್ಗಿಕ ಸಂಪತ್ತನ್ನು ಮಾತ್ರ ಲೂಟಿ ಮಾಡಿಲ್ಲ, ಗಣಿ ಧಣಿಗಳು ಅಪಾರ ಪ್ರಮಾಣದಲ್ಲಿ ತೆರಿಗೆ ವಂಚಿಸಿರುವುದಾಗಿ ಆರೋಪಿಸಿದರು.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಚ್.ಎಸ್.ಕಪಾಡಿಯಾ ನೇತೃತ್ವದ ವಿಶೇಷ ನ್ಯಾಯಪೀಠ ಶುಕ್ರವಾರ, ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ವಿಚಾರಣೆಗೆ ರಚಿಸಿದ್ದ ಕೇಂದ್ರೀಯ ಉನ್ನತಾಧಿಕಾರ ಸಮಿತಿ(ಸಿಇಸಿ) ನೀಡಿದ ಮಧ್ಯಂತರ ವರದಿ ಆಧಾರದ ಮೇಲೆ ರಾಜ್ಯದ ಬಳ್ಳಾರಿ ವಿಭಾಗದಲ್ಲಿ 19 ಗಣಿ ಕಂಪನಿಗಳ ಕಾರ್ಯಚಟುವಟಿಕೆ ಹಾಗೂ ಅದಿರು ಸಾಗಣೆಯನ್ನು ನಿಲ್ಲಿಸಬೇಕೆಂದು ತೀರ್ಪು ನೀಡಿತ್ತು.
ಇವನ್ನೂ ಓದಿ