ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ಬಗ್ಗೆ ಮಾತಾಡಲು ಸುಷ್ಮಾಗೆ ಹಕ್ಕಿಲ್ಲ: ಎಚ್‌ಡಿಕೆ (Kumaraswamy | BJP | JDS | Sushma swaraj | 2G Scam | PAC)
ಆಡಳಿತಾರೂಢ ಕೇಂದ್ರದ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್‌ಗೆ ನೈತಿಕ ಹಕ್ಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶನಿವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಸರಕಾರ ಉತ್ತಮ ಆಡಳಿತ ನೀಡುತ್ತಿಲ್ಲ ಎಂಬ ಬಗ್ಗೆ ಬಿಜೆಪಿ ಘಟಕದ ನೂತನ ಕಚೇರಿ ಉದ್ಘಾಟನೆ ವೇಳೆ ಪಕ್ಷದ ವರಿಷ್ಠ ಅಡ್ವಾಣಿಯವರೇ ಸೂಕ್ಷ್ಮವಾಗಿ ಹೇಳಿದ್ದಾರೆ. ಹಾಗಾಗಿ ಅವರಿಗಿರುವ ಪಾಪಪ್ರಜ್ಞೆ ಅವರದೇ ಪಕ್ಷದ ನಾಯಕಿ ಸುಷ್ಮಾಗಿಲ್ಲ ಎಂದು ಟೀಕಿಸಿದರು.

ಗಣಿ ರೆಡ್ಡಿಗಳಿಗೆ ಕುಮ್ಮಕ್ಕು ನೀಡುತ್ತಿರುವ ಸುಷ್ಮಾ ಸ್ವರಾಜ್ ಬಿಜೆಪಿ ಪಕ್ಷದ ಭ್ರಷ್ಟಾಚಾರ, ದುರಾಡಳಿತದ ಬಗ್ಗೆ ಮಾತನಾಡಲಿ. ಮೊದಲು ಅವರ ಪಕ್ಷವನ್ನು ಸರಿ ಮಾಡಿಕೊಳ್ಳಲಿ, ನಂತರ ಉಪದೇಶ ನೀಡಲಿ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ವಿರುದ್ಧ ಸುಷ್ಮಾ ವಾಗ್ದಾಳಿ:
ಆಡಳಿತಾರೂಢ ಕಾಂಗ್ರೆಸ್ ಪಕ್ಷ 2ಜಿ ಸ್ಪೆಕ್ಟ್ರಂ ಹಗರಣ ನಡೆದಿಲ್ಲ ಎಂದು ಹೇಳುತ್ತಿದೆ. ಹಾಗಾದರೆ ಸಿಬಿಐ ಆರೋಪ ಪಟ್ಟಿಯಲ್ಲಿ 18 ಸಾವಿರ ಕೋಟಿ ರೂಪಾಯಿ ಹಗರಣದಲ್ಲಿ ಮಾಜಿ ಸಚಿವ ರಾಜಾ ಜೈಲು ಸೇರಿದ್ದು ಏಕೆ ಎಂದು ಪ್ರಶ್ನಿಸಿರುವ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್, ಪಿಎಸಿ ವಿಚಾರದಲ್ಲಿ ಕೇಂದ್ರ ಯುಪಿಎ ಸರಕಾರ ಒತ್ತಡ ಹಾಕುವುದನ್ನು ಗಮನಿಸಿದರೆ ಮತ್ತೊಂದು ತುರ್ತು ಪರಿಸ್ಥಿತಿ ಹೇರಲು ಪಕ್ಷ ಸಿದ್ದವಾಗಿದೆ ಎಂದು ಆರೋಪಿಸಿದರು.

ಶನಿವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2ಜಿ ಹಗರಣ ತನಿಖೆ ಕರಡು ಪ್ರತಿ ಮೊದಲೇ ಮಾಧ್ಯಮಗಳಿಗೆ ಬಿಡುಗಡೆಯಾಗುವಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ಅಧ್ಯಕ್ಷ ಮುರಳಿ ಮನೋಹರ ಜೋಷಿ ಕೈವಾಡವಿಲ್ಲ ಎಂದು ಸಮಜಾಯಿಷಿ ನೀಡಿದರು.
ಇವನ್ನೂ ಓದಿ