ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ಜತೆ ನನ್ನ ಹೋಲಿಕೆ ಬೇಡ: ದೇವೇಗೌಡ (BJP | JDS | Deve gowda | Yeddyurappa | Kumaraswamy)
ಯಾವುದೇ ಕಾರಣಕ್ಕೂ ಈಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ನನ್ನನ್ನು ಹೋಲಿಕೆ ಮಾಡಬೇಡಿ. ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಎಲ್ಲ ಆಗಿ ಎಲ್ಲವನ್ನೂ ಅನುಭವಿಸಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇವೇಗೌಡರು ಮನೆಯಲ್ಲೇ ಕುಳಿತುಕೊಂಡು ವರ್ಗಾವಣೆ ಮಾಡುತ್ತಿದ್ದರು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಿರುವ ಆರೋಪಗಳ ಬಗ್ಗೆ ಗಮನ ಸೆಳೆದಾಗ ದಯವಿಟ್ಟು ಅವರ ಜತೆ ನನ್ನ ಹೋಲಿಕೆ ಮಾಡಬೇಡಿ ಎಂದರು.

ಸರಕಾರದ ಭ್ರಷ್ಟಾಚಾರದ ವಿರುದ್ಧ ಪಕ್ಷಾತೀತ ಹೋರಾಟ ಆರಂಭಿಸಿದ್ದೇವೆ. ಸಾಹಿತಿಗಳು, ಬುದ್ದಿಜೀವಿಗಳು ಈ ಹೋರಾಟದ ನೇತೃತ್ವ ವಹಿಸಿಕೊಳ್ಳಲಿದ್ದಾರೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಅವರ ಹಿಂದೆ ಹೋಗುತ್ತೇನೆ ಎಂದರು.

ನಂತರ ಸರಕಾರದ ವಿರುದ್ಧ ಹೋರಾಟ ನಡೆಸುವ ಬಗ್ಗೆ ಸಾಹಿತಿಗಳ ಸಭೆಯಲ್ಲಿ ವಿವರವಾಗಿ ಚರ್ಚೆ ಮಾಡಲಾಯಿತು. ಈ ಸಭೆಯಲ್ಲಿ ಎಚ್.ಎಸ್.ದೊರೆಸ್ವಾಮಿ, ಪ್ರೊ.ಕೆ.ಇ.ರಾಧಾಕೃಷ್ಣ, ಮಹಾಬಲ ಕೊಡ್ಲಿಕೆರೆ ಪಾಲ್ಗೊಂಡಿದ್ದರು.
ಇವನ್ನೂ ಓದಿ