ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಪ್ಪ-ಮಕ್ಕಳದ್ದು ಕಿರುಕುಳದ ರಾಜಕಾರಣ: ಯಡಿಯೂರಪ್ಪ (Deve gowda | Kumaraswamy | JDS | Congress | BJP | Yeddyurappa)
ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಬ್ಬರೂ ನಿರಂತರವಾಗಿ ಕಿರುಕುಳದ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲಾ ಮುಖ್ಯಮಂತ್ರಿಗಳಿಗೂ ಕಿರುಕುಳ ನೀಡುತ್ತಾ ಬಂದಿದ್ದಾರೆ. ತಮ್ಮದೇ ಪಕ್ಷದ ಎಸ್.ಆರ್.ಬೊಮ್ಮಾಯಿ, ಜೆ.ಎಚ್.ಪಟೇಲ್ ಅವರಿಗೂ ಕಿರುಕುಳ ಕೊಟ್ಟಿದ್ದರು. ನಂತರ ಕಾಂಗ್ರೆಸ್‌ನ ಎಸ್.ಎಂ.ಕೃಷ್ಣ, ಧರಂಸಿಂಗ್ ಅವರನ್ನೂ ಬಿಡಲಿಲ್ಲ ಎಂದು ಕಿಡಿಕಾರಿದರು.

ಎಲ್ಲರಿಗೂ ಉಪಟಳ ಕೊಡುವುದೇ ಇವರ ಚಾಳಿಯಾಗಿದೆ. ಒಬ್ಬ ಮಾಜಿ ಪ್ರಧಾನಿಯಿಂದ ಈ ರೀತಿಯ ಕಿರುಕುಳ ರಾಜಕಾರಣವನ್ನು ನಾನು ನಿರೀಕ್ಷೆ ಮಾಡಿರಲಿಲ್ಲ ಎಂದ ಅವರು, ದೇವೇಗೌಡರ ಈ ಕಿರುಕುಳದ ರಾಜಕಾರಣಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಆದರೂ ಬುದ್ಧಿ ಬಂದಿಲ್ಲ ಎಂದು ವ್ಯಂಗ್ಯವಾಡಿದರು.

ಗೌಡರು ಈಗ ನನ್ನ ವಿರುದ್ಧ ಜನಾಂದೋಲನ ಮಾಡಲು ಹೊರಟಿದ್ದಾರೆ. ಇವರಿಗೆ ಬೆಂಬಲ ನೀಡದಂತೆ ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳನ್ನು ಖುದ್ದು ಭೇಟಿ ಮಾಡಿ ಮನವಿ ಮಾಡುತ್ತೇನೆ. ಇಲ್ಲವೇ ಪತ್ರ ಬರೆದು ಕೇಳಿಕೊಳ್ಳುತ್ತೇನೆ. ನಮ್ಮ ಸರಕಾರ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದನ್ನು ವಿವರಿಸುತ್ತೇನೆ. ಕಾಂಗ್ರೆಸ್, ಜೆಡಿಎಸ್ ನಡೆಸಿರುವ ಹಗರಣಗಳನ್ನು ಜನರ ಮುಂದೆ ಬಿಚ್ಚಿಡಲು ನಾನು ಸಜ್ಜಾಗುತ್ತಿದ್ದೇನೆ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.
ಇವನ್ನೂ ಓದಿ