ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗವರ್ನರ್ ದೆಹಲಿಗೆ ಹೋದ್ರೆ ನಮಗೇನು?: ಯಡಿಯೂರಪ್ಪ (BJP | Yeddyurappa | Bharadwaj | Karnataka | Delhi | Congress)
ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ದೆಹಲಿಗೆ ಭೇಟಿ ನೀಡಿರುವುದು ತಮಗೆ ಗೊತ್ತಿಲ್ಲ ಎಂದು ತಿಳಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಪಾಲರ ಭೇಟಿ ಬಗ್ಗೆ ಪ್ರಶ್ನಿಸಲು ನಮಗೆ ಯಾವುದೇ ಅಧಿಕಾರವಿಲ್ಲ ಎಂದರು.

ಸಂವಿಧಾನದ ಚೌಕಟ್ಟಿನಡಿಯಲ್ಲಿ ಕರ್ತವ್ಯ ನಿರ್ವಹಿಸುವ ರಾಜ್ಯಪಾಲರು ಎಲ್ಲಿ ಯಾರನ್ನು ಭೇಟಿ ಮಾಡಲು ಅವಕಾಶವಿದೆ. ರಾಷ್ಟ್ರಪತಿ, ಪ್ರಧಾನಮಂತ್ರಿ ಸೇರಿದಂತೆ ಯಾರನ್ನು ಬೇಕಾದರೂ ಅವರು ಭೇಟಿ ಮಾಡಿ ಮಾತನಾಡಬಹುದು. ಅವರ ಭೇಟಿ ಬಗ್ಗೆ ಪ್ರಶ್ನಿಸುವ ಅಧಿಕಾರ ನಮಗಿಲ್ಲ.

ಗೃಹಕಚೇರಿ ಕೃಷ್ಣಾದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯಪಾಲರು ತಮ್ಮ ಆದ ಕಾರಣಗಳಿಗಾಗಿ ದೆಹಲಿಗೆ ಹೋಗಿರಬಹುದು. ಇದರ ಬಗ್ಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ಹೇಳಿದರು.

ಅಲ್ಲದೇ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಶುಕ್ರವಾರ ಹೊರಬೀಳಲಿದೆ. ಮತದಾರರು ನೀಡಿರುವ ತೀರ್ಪು ಅಂದು ಬಹಿರಂಗವಾಗಲಿದೆ. ಚುನಾವಣೆಗೆ ಮುನ್ನ ಮತದಾರರ ಒಲವು ಬಿಜೆಪಿ ಪರ ಇತ್ತು. ಫಲಿತಾಂಶದಲ್ಲಿ ನಾವು ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಯಡಿಯೂರಪ್ಪ ಈ ಸಂದರ್ಭದಲ್ಲಿ ವಿಶ್ವಾಸವ್ಯಕ್ತಪಡಿಸಿದರು.

ಆಡಳಿತಾರೂಢ ಬಿಜೆಪಿ ವಿರುದ್ಧ ಇತ್ತೀಚೆಗಷ್ಟೇ ಕಾಂಗ್ರೆಸ್ ರಾಜಭವನ ಚಲೋ ಚಳವಳಿ ನಡೆಸಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿತ್ತು. ಆ ನಿಟ್ಟಿನಲ್ಲಿ ಭಾರದ್ವಾಜ್ ಅವರು ದೆಹಲಿಗೆ ಭೇಟಿ ನೀಡಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಇವನ್ನೂ ಓದಿ