ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 3 ಕ್ಷೇತ್ರದಲ್ಲೂ ಬಿಜೆಪಿ 'ವಿಜಯಪತಾಕೆ',ಜೆಡಿಎಸ್,ಕೈಗೆ ಮುಖಭಂಗ (By poll | BJP | Congress | JDS | Yeddyurappa | Kumaraswamy)
PR
ಆಪರೇಷನ್ ಕಮಲದಿಂದ ತೆರವಾದ ರಾಜ್ಯದ ಮೂರು ಕ್ಷೇತ್ರಗಳಲ್ಲಿನ ಉಪ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಸೋಲನ್ನ ಅನುಭವಿಸಿದ್ದು, ಇದರಿಂದಾಗಿ ಬಿಜೆಪಿ ನೇತೃತ್ವದ ಬಿ.ಎಸ್.ಯಡಿಯೂರಪ್ಪ ಸರಕಾರಕ್ಕೆ ಮತ್ತಷ್ಟು ಬಲತಂದುಕೊಟ್ಟಂತಾಗಿದೆ.

ಆಪರೇಷನ್ ಕಮಲದಿಂದಾಗಿ ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ.ಅಶ್ವತ್ಥ್, ಜಗಳೂರಿನ ಕಾಂಗ್ರೆಸ್ ಶಾಸಕ ಎಸ್.ವಿ.ರಾಮಚಂದ್ರ ಹಾಗೂ ಬಂಗಾರಪೇಟೆಯ ಕಾಂಗ್ರೆಸ್ ಶಾಸಕ ಎಂ.ನಾರಾಯಣಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಏಪ್ರಿಲ್ 9ರಂದು ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿತ್ತು.

ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಕೊರಳಿಗೆ ಜಯದ ಮಾಲೆ:

ಯೋಗೇಶ್ವರ್‌ಗೆ ಮೆಗಾ ಗೆಲುವು- ಪ್ರತಿಷ್ಠಿತ ಅಖಾಡವೆಂದೇ ಬಿಂಬಿತವಾಗಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಶಾಸಕ, ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ (70,070) 17,687 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿ ಜೆಡಿಎಸ್‌ನ ಸಿಂ.ಲಿಂ.ನಾಗರಾಜ್ (57,383) ಅವರನ್ನು ಸೋಲಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಘುನಂದನ್ ರಾಮಣ್ಣ 13,134 ಮತ ಪಡೆದು ಠೇವಣಿ ಕಳೆದುಕೊಂಡು ಹೀನಾಯ ಸೋಲು ಅನುಭವಿಸಿದ್ದಾರೆ.

PR
ಬಂಗಾರಪೇಟೆಯ ಬಿಜೆಪಿ ಅಭ್ಯರ್ಥಿ (ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿದ್ದರು) ಎಂ.ನಾರಾಯಣ ಸ್ವಾಮಿ (56,824) ಅವರು 4150 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ನಾರಾಯಣಸ್ವಾಮಿ (52,780) ಪರಾಜಯಗೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸಿ.ವೆಂಕಟೇಶಪ್ಪ (9255) ಹೀನಾಯ ಸೋಲು ಕಂಡಿದ್ದಾರೆ.

ಜಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ.ರಾಮಚಂದ್ರಪ್ಪ ಅವರು 4,433 ಮತಗಳ ಅಂತರದಿಂದ ಜಯ ಗಳಿಸುವ (41,960) ಮೂಲಕ ತೀವ್ರ ಸ್ಪರ್ಧೆಯೊಡ್ಡಿದ್ದ ಪಕ್ಷೇತರ ಅಭ್ಯರ್ಥಿ ರಾಜೇಶ್ (37,528) ಅವರನ್ನು ಪರಾಭವಗೊಳಿಸಿದ್ದಾರೆ. ಅಲ್ಲದೇ ಕಾಂಗ್ರೆಸ್‌ನ ವೈ.ದೇವೇಂದ್ರಪ್ಪ (28,625), ಜೆಡಿಎಸ್‌ನ ಹುಚ್ಚವ್ವನಹಳ್ಳಿ ಮಂಜುನಾಥ್ (3804) ಠೇವಣಿ ಕಳೆದುಕೊಂಡು ಮುಖಭಂಗ ಅನುಭವಿಸಿದ್ದಾರೆ.

ಆಪರೇಶನ್ ಕಮಲದಿಂದ ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಚನ್ನಪಟ್ಟಣ ಕ್ಷೇತ್ರದಿಂದ ಗೆದ್ದಿದ್ದ ಜೆಡಿಎಸ್ ಅಭ್ಯರ್ಥಿ ಎಂ.ಸಿ.ಅಶ್ವಥ್, ಜಗಳೂರಿನ ಕಾಂಗ್ರೆಸ್ ಶಾಸಕ ಎಸ್.ವಿ.ರಾಮಚಂದ್ರ, ಹಾಗೂ ಬಂಗಾರಪೇಟೆಯ ಎಂ.ನಾರಾಯಣ ಸ್ವಾಮಿ ರಾಜೀನಾಮೆ ಕೊಟ್ಟಿದ್ದರು.ಕಳೆದ ಅಕ್ಟೋಬರ್ 10ರಂದು ಅಶ್ವಥ್, 19ರಂದು ಎಸ್.ವಿ.ರಾಮಚಂದ್ರ, 20ರಂದು ಎಂ.ನಾರಾಯಣಸ್ವಾಮಿ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದರು.
ಇವನ್ನೂ ಓದಿ