ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದರೆ, ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದ ಮಾಜಿ ಸಚಿವ ಜನಾರ್ದನ ಪೂಜಾರಿ ನುಡಿದಂತೆ ನಡೆದುಕೊಳ್ಳುವರೇ ಎಂಬುದು ಕುತೂಹಲದ ಪ್ರಶ್ನೆಯಾಗಿದೆ.
ಕಳೆದ ಒಂದು ತಿಂಗಳ ಹಿಂದೆ ರಾಜ್ಯದ ಚನ್ನಪಟ್ಟಣ, ಜಗಳೂರು ಹಾಗೂ ಬಂಗಾರಪೇಟೆ ಕ್ಷೇತ್ರದ ಉಪಚುನಾವಣೆಗೂ ಮುನ್ನ ಪೂಜಾರಿ ಅವರು, ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮೂರು ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದರೆ, ತಾವು ನಿವೃತ್ತಿಯಾಗುವುದಾಗಿ ಘೋಷಿಸಿದ್ದರು. ಅಲ್ಲದೇ ಬಿಜೆಪಿ ಒಂದರಲ್ಲಿ ಸೋತರೂ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸವಾಲು ಹಾಕಿದ್ದರು.
ಇದೀಗ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಬಾರಿಸಿ, ಕಾಂಗ್ರೆಸ್ ಮತ್ತು ಜೆಡಿಎಸ್ ಕೋಟೆಗೆ ಲಗ್ಗೆ ಹಾಕಿ ಕಮಲದ ಪತಾಕೆ ಹಾರಿಸಿದೆ. ಹಾಗಾದರೆ ಪೂಜಾರಿ ರಾಜಕೀಯ ನಿವೃತ್ತಿ ಹೊಂದಲಿದ್ದಾರೆಯೇ ಎಂಬುದು ಕಾದು ನೋಡಬೇಕಾಗಿದೆ.