ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗವರ್ನರ್ ಸೂಚಿಸಿದ್ರೆ ವಿಶ್ವಾಸಮತ ಸಾಬೀತಿಗೆ ಸಿದ್ದ: ಸಿಎಂ (BJP | Congress | Yeddyurappa | Bharadwaj | Trust vote,)
ಸದ್ಯದ ಪರಿಸ್ಥಿತಿಯಲ್ಲಿ ಮತ್ತೆ ವಿಶ್ವಾಸಮತ ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಸೂಚಿಸಿದರೆ ಬಹುಮತ ಸಾಬೀತುಪಡಿಸುವುದಾಗಿ ತಿಳಿಸಿದ್ದಾರೆ.

ಸರಕಾರಕ್ಕೆ ಸ್ಪಷ್ಟ ಬಹುಮತವಿದೆ. ವಿಧಾನಸಭೆಯಲ್ಲಿ ನಮಗೆ 121 ಸದಸ್ಯರಿದ್ದಾರೆ. ಸದ್ಯಕ್ಕೆ ಬಹುಮತ ಸಾಬೀತುಪಡಿಸುವ ಪ್ರಮೇಯ ಎದುರಾಗಿಲ್ಲ. ಒಂದು ವೇಳೆ ರಾಜ್ಯಪಾಲರು ಸೂಚಿಸಿದರೆ ಅದಕ್ಕೆ ಬದ್ದನಿರುವುದಾಗಿ ಹೇಳಿದರು.

ವಿಧಾನಸೌಧದಲ್ಲಿ ನೂತನ ಶಾಸಕರಾದ ಎಸ್.ವಿ.ರಾಮಚಂದ್ರ, ಎಂ.ನಾರಾಯಣಸ್ವಾಮಿ ಹಾಗೂ ಸಿ.ಪಿ.ಯೋಗೇಶ್ವರ್ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಅನರ್ಹಗೊಂಡು ಅರ್ಹತೆ ಪಡೆದಿರುವ 11 ಮಂದಿ ಶಾಸಕರು ಸೇರಿದಂತೆ ನಮ್ಮ ಸಂಖ್ಯೆ 121ಕ್ಕೆ ಏರಿದೆ. ರಾಜ್ಯಪಾಲರಿಗೆ ಸಂವಿಧಾನ ಬದ್ದವಾದ ಅಧಿಕಾರವಿದೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದ್ದು ಅವರು ಸೂಚಿಸಿದ ನಿರ್ದೇಶನಕ್ಕೆ ಬದ್ದನಿರುತ್ತೇನೆ ಎಂದರು.

ರಾಜ್ಯಪಾಲರು ಸೋಮವಾರದಿಂದ ಅಧಿವೇಶನ ನಡೆಸಲು ಅನುಮತಿ ನೀಡದಿರುವ ಬಗ್ಗೆ ಗಮನ ಸೆಳೆದಾಗ, ಅವರು ದೆಹಲಿಯಿಂದ ಹಿಂದಿರುಗಿದ ವೇಳೆ ನಾನು ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ತಿಳಿಸಿದರು. ರಾಜ್ಯಪಾಲರಿಂದ ಸರಕಾರಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ. ಉಳಿದಿರುವ ಎರಡು ವರ್ಷಗಳ ಅವಧಿಗೆ ರಾಜ್ಯಪಾಲರು ಸರಕಾರಕ್ಕೆ ಪೂರ್ಣ ಬೆಂಬಲ ನೀಡಲಿದ್ದಾರೆ ಎಂಬ ಆತ್ಮವಿಶ್ವಾಸವ್ಯಕ್ತಪಡಿಸಿದರು.
ಇವನ್ನೂ ಓದಿ