ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿಯಲ್ಲಿ ನಪುಂಸಕರಿದ್ದಾರೆ: ಜನಾರ್ದನ ಪೂಜಾರಿ ವ್ಯಂಗ್ಯ (BJP | Janardana Poojary | Congress | Karnataka Crisis | Yeddyurappa)
ಭ್ರಷ್ಟಾಚಾರ, ಸ್ವಜನಪಕ್ಷಪಾತದ ಗಂಭೀರ ಆರೋಪಗಳಿದ್ದರೂ ಕೂಡ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಗದ್ದುಗೆಯಿಂದ ಕೆಳಗಿಳಿಸಲು ಆಗುತ್ತಿಲ್ಲ, ಯಾಕೆಂದರೆ ಬಿಜೆಪಿಯಲ್ಲಿ ನಪುಂಸಕರಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜನಾರ್ದನ ಪೂಜಾರಿ ಲೇವಡಿ ಮಾಡಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಕುರಿತು ಕೇಂದ್ರಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರ ಮಾಡಿರುವ ಶಿಫಾರಸು ವರದಿಯನ್ನು ಅವರು ಬಲವಾಗಿ ಸಮರ್ಥಿಸಿಕೊಂಡರು.

11ಮಂದಿ ಬಿಜೆಪಿ ಹಾಗೂ ಐವರು ಪಕ್ಷೇತರರ ಶಾಸಕರ ಅನರ್ಹತೆಯನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಅಲ್ಲದೇ ಸ್ಪೀಕರ್ ಮತ್ತು ಮುಖ್ಯಮಂತ್ರಿ ಕಾರ್ಯವೈಖರಿ ಬಗ್ಗೆ ಅಸಮಾಧಾನವ್ಯಕ್ತಪಡಿಸಿತ್ತು. ಇದರಿಂದಾಗಿ ಯಡಿಯೂರಪ್ಪ ಮತ್ತು ಸ್ಪೀಕರ್ ಬೋಪಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಸಾಬೀತಾಗಿದೆ. ಹಾಗಾಗಿ ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಭ್ರಷ್ಟಾಚಾರ, ಸ್ವಜನಪಕ್ಷಪಾತ, ಸಂವಿಧಾನ ವಿರೋಧಿತನದಲ್ಲಿ ಮುಳುಗಿರುವ ಬಿಜೆಪಿ ಸರಕಾರ ನಮಗೆ ಬೇಕಾ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾನೂನು ಬಾಹಿರವಾಗಿ ಅಧಿಕಾರ ನಡೆಸುತ್ತಿದ್ದು, ಕೇಂದ್ರ ಸರಕಾರ ಕೂಡಲೇ ಬಿಜೆಪಿ ಸರಕಾರವನ್ನು ವಜಾಗೊಳಿಸಬೇಕೆಂದು ಮನವಿ ಮಾಡಿದರು.

ಸ್ಪೀಕರ್ ಕೆ.ಜಿ.ಬೋಪಯ್ಯ ಅವರನ್ನು ದಡ್ಡ ಎಂದು ವಾಗ್ದಾಳಿ ನಡೆಸಿದ ಪೂಜಾರಿ, ಯಡಿಯೂರಪ್ಪ ಅವರ ನಿರ್ದೇಶನದ ಮೇರೆಗೆ ಶಾಸಕರನ್ನು ಅನರ್ಹಗೊಳಿಸಿ ಸುಪ್ರೀಂಕೋರ್ಟ್‌ನಿಂದ ಕಪಾಳಮೋಕ್ಷ ಮಾಡಿಕೊಂಡಿರುವುದಾಗಿ ಹೇಳಿದರು.
ಇವನ್ನೂ ಓದಿ