ಅಕ್ರಮ ಗಣಿಗಾರಿಕೆ ವರದಿ ಮುಕ್ತಾಯದ ಹಂತದಲ್ಲಿದ್ದು, ಶೀಘ್ರವೇ ಸರಕಾರಕ್ಕೆ ಸಲ್ಲಿಸಲಾಗುವುದು. ಒಂದು ವೇಳೆ ಸರಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ರೆ ನ್ಯಾಯಾಲಯಕ್ಕೆ ಮೊರೆ ಹೋಗಲು ಸಿದ್ಧ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದ್ದಾರೆ.
ಅಕ್ರಮ ಗಣಿಗಾರಿಕೆ ಕುರಿತ ವರದಿ ಅಂತಿಮ ಹಂತದಲ್ಲಿದೆ. ಗಣಿ ಕಂಪೆನಿಗಳಿಂದ ಅಕ್ರಮ ಅದಿರು ರಫ್ತು ಕುರಿತು ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಈಗಾಗಲೇ ಸಲ್ಲಿಸಿದ ಮಧ್ಯಂತರ ವರದಿಯ ಬಗ್ಗೆ ಸರಕಾರ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಅಕ್ರಮ ಗಣಿಗಾರಿಕೆ ವರದಿಯನ್ನು ಕೆಲ ದಿನಗಳಲ್ಲಿ ಮಂಡಿಸಲಿದ್ದು, ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಕೋರ್ಟ್ ಮೊರೆ ಹೋಗುವುದಾಗಿ ಸ್ಪಷ್ಟಪಡಿಸಿದರು.
ಕಳೆದ 2008ರ ಡಿಸೆಂಬರ್ 18 ರಂದು ಮೊದಲ ವರದಿಯಲ್ಲಿ ಮಾಜಿ ಮುಖ್ಯಮಂತ್ರಿ ಎನ್.ಧರ್ಮ್‌ಸಿಂಗ್ ಸೇರಿದಂತೆ ಮೈಸೂರ್ ಮಿನರಲ್ಸ್‌ನ 11 ಉನ್ನತ ಅಧಿಕಾರಿಗಳ ಬಗ್ಗೆ ಸ್ಪಷ್ಟವಾದ ಕೈವಾಡಗಳ ಬಗ್ಗೆ ವರದಿ ಸಲ್ಲಿಸಲಾಗಿತ್ತು. ಆದರೆ, ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ವಿಷಾದ ವ್ಯಕ್ತಪಡಿಸಿದ್ದಾರೆ.