ಸಿಎಂ ವಿರುದ್ಧದ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾದಲ್ಲಿ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ರಾಜನಾಥ್ ಸಿಂಗ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಿರ್ಧಾರದಂತೆ ರೆಡ್ಡಿ ಸಹೋದರರಿಗೆ ಸಚಿವ ಸ್ಥಾನ ನೀಡಲಾಗಿದೆ. ಯಡಿಯೂರಪ್ಪ ನೇತೃತ್ವದ ಸರಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.
ಯುಪಿಎ ಸರಕಾರ ಅಧಿಕಾರಕ್ಕೆ ಬಂದ ನಂತರ, ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದೆ. ದೇಶದ ಅಭಿವೃದ್ಧಿಗಾಗಿ ಯಾವುದೇ ಉತ್ತಮ ಯೋಜನೆಗಳನ್ನು ಹಮ್ಮಿಕೊಂಡಿಲ್ಲ ಎಂದು ಆರೋಪಿಸಿದರು.
ರಾಜ್ಯ ಸರಕಾರವನ್ನು ವಜಾಗೊಳಿಸಲು ಕೇಂದ್ರ ಸರಕಾರ ಕುತಂತ್ರ ನಡೆಸಿದೆ ಎಂದು ಬಿಜೆಪಿ ಹಿರಿಯ ನಾಯಕ ರಾಜ್‌ನಾಥ್‌ಸಿಂಗ್ ಟೀಕಿಸಿದರು.