ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವಿಧಾನಮಂಡಲ ಅಧಿವೇಶನ ಬಹಿಷ್ಕರಿಸಲು ಜೆಡಿಎಸ್ ನಿರ್ಧಾರ (JD-S | Assembly session | Boycott | B S Yeddyurappa | K G Bopaiah)
PTI
ಶಾಸಕರ ಅನರ್ಹತೆ ಪ್ರಕರಣದಲ್ಲಿ ವಿಧಾನಸಭೆ ಸ್ಪೀಕರ್ ಕೆ.ಜಿ.ಬೋಪಯ್ಯ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿ ಗುರುವಾರದಿಂದ ಆರಂಭವಾಗಲಿರುವ ವಿಧಾನ ಮಂಡಲ ಅಧಿವೇಶನ ಬಹಿಷ್ಕರಿಸಲು ಜೆಡಿಎಸ್ ನಿರ್ಧರಿಸಿದೆ.

ಇದರೊಂದಿಗೆ ಬಿಜೆಪಿ ಸರಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿರುವ ಜೆಡಿಎಸ್ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳುವುದಾಗಿ ಹೇಳಿಕೆ ನೀಡಿದೆ.

ಈ ಮೂಲಕ ಮೂರು ವರ್ಷದ ಅಧಿಕಾರವಧಿ ಪೂರ್ಣಗೊಳಿಸಿದ ಸಂತಸದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಮತ್ತೊಂದು ಆಘಾತ ನೀಡಿದೆ.

ಸೋಮವಾರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸ್ಪೀಕರ್ ಕೆ.ಜಿ.ಬೋಪಯ್ಯ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವವರೆಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ಪಾಲ್ಗೊಳ್ಳುವುದು ಬೇಡ ಎನ್ನುವ ನಿರ್ಧಾರಕ್ಕೆ ಬಂದಿದೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕರ ಅನ್ರಹತೆಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅನುಕೂಲ ಮಾಡಿಕೊಡಲು ಅವರ ಪ್ರೇರಣೆಯಿಂದಲೇ ಸ್ಪೀಕರ್ ನಿಯಮ ಬಾಹಿರವಾಗಿ ಶಾಸಕರನ್ನು ಅನರ್ಹಗೊಳಿಸಿದ್ದಾರೆ ಎಂದು ತೀರ್ಪು ನೀಡಿದೆ. ಆದ್ದರಿಂದ ಅವರಿಬ್ಬರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಅನಾಗರಿಕ ನಡುವಳಿಕೆಯ ಮೂಲಕ ಮುಖ್ಯಮಂತ್ರಿ ಮತ್ತು ಸ್ಪೀಕರ್ ಪ್ರಜಾಪ್ರಭುತ್ವದ ದೇವಾಲಯವಾದ ಸದನವನ್ನೆ ಅಪಮೌಲ್ಯ ಮಾಡಿದ್ದಾರೆ.ಇವರಿಬ್ಬರೂ ಸ್ಥಾನದಲ್ಲಿ ಮುಂದುವರಿದರೆ ಸದನದ ಗೌರವ ಸಂಪೂರ್ಣ ನಾಶವಾಗಲಿದೆ. ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ಕಲಾಪದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಇವನ್ನೂ ಓದಿ