ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಮದೇವ್‌ಗೆ ಕೋಟಿ, ಕೋಟಿ ಆಸ್ತಿ ಎಲ್ಲಿಂದ ಬಂತು?: ವಿಶ್ವನಾಥ್ (Ramdev | corruption | black money | hunger strike | Vishwanatha)
PR
ವಿದೇಶಗಳಲ್ಲಿ ಕೂಡಿಟ್ಟಿರುವ ಕಪ್ಪು ಹಣ ವಾಪಸ್ ತರಿಸಬೇಕು ಎಂದು ಒತ್ತಾಯಿಸಿ ಯೋಗ ಗುರು ಬಾಬಾ ರಾಮದೇವ್ ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಇದಕ್ಕೆ ರಾಜ್ಯ ಸೇರಿದಂತೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಏತನ್ಮಧ್ಯೆ ಬಾಬಾ ರಾಮದೇವ್ ಅರ್ಧ ಸಂತ, ಅರ್ಧ ಯೋಗ ಗುರು ಎಂದು ಕಾಂಗ್ರೆಸ್ ಮುಖಂಡ, ಸಂಸದ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ಬಾಬಾ ರಾಮದೇವ್ ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,ಹೋರಾಟದ ಹೆಸರಿನಲ್ಲಿ ಬಾಬಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅಷ್ಟೇ ಅಲ್ಲ ಭ್ರಷ್ಟಾಚಾರ ನಿರ್ಮೂಲನೆ ಹೆಸರಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿ ರಾಜಕೀಯ ವೇದಿಕೆ ಕಲ್ಪಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಬಾಬ ರಾಮದೇವ್ ಅವರನ್ನೇ ಪ್ರಶ್ನಿಸಬೇಕಾಗಿದೆ ಎಂದ ವಿಶ್ವನಾಥ್, ಒಬ್ಬ ಸಂತನಾದವನಿಗೆ ಇಷ್ಟೊಂದು ಪ್ರಮಾಣದಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಎಲ್ಲಿಂದ ಬಂತು?. ಹಾಗಾಗಿ ಬಾಬಾ ರಾಮದೇವ್ ಅವರು ಮೊದಲು ತಮ್ಮ ಆಸ್ತಿ ವಿವರ ಘೋಷಿಸಲಿ ಎಂದು ಈ ಸಂದರ್ಭದಲ್ಲಿ ಹೇಳಿದರು.

ಯೋಗದ ಹೆಸರಿನಲ್ಲಿ ಕೆಲವೇ ವರ್ಷಗಳಲ್ಲಿ ಬಾಬಾ ಇಷ್ಟೊಂದು ಪ್ರಮಾಣದ ಆಸ್ತಿ ಮಾಡಿದರಾ? ರಾಮದೇವ್ ಸ್ಕಾಟ್‌ಲ್ಯಾಂಡ್ ದ್ವೀಪ ಪ್ರದೇಶವನ್ನು 20 ಲಕ್ಷ ಪೌಂಡ್ ಕೊಟ್ಟು ಖರೀದಿಸಿದ್ದಾರೆ. ಅಷ್ಟೇ ಅಲ್ಲ ಪತಂಜಲಿ ಯೂನಿವರ್ಸಿಟಿ, ಆಸ್ಪತ್ರೆ ಸೇರಿದಂತೆ ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿರುವ ಬಾಬಾ ಇಷ್ಟೆಲ್ಲಾ ಹೇಗೆ ಗಳಿಸಿದರು ಎಂಬುದನ್ನು ಮೊದಲು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ಇವನ್ನೂ ಓದಿ