ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವೈದ್ಯರನ್ನು ವಾಪಸ್ ಕರೆಸಿ: ಸರಕಾರಕ್ಕೆ ಹೈಕೋರ್ಟ್ (High court | BJP | Yeddyurappa | Doctors | Transfer,)
ನಿಯೋಜನೆ ಆಧಾರದ ಮೇಲೆ ರಾಜ್ಯದ ವಿವಿಧೆಡೆ ವರ್ಗಾವಣೆಗೊಂಡಿರುವ ಸರಕಾರಿ ವೈದ್ಯರನ್ನು ವಾಪಸು ಕರೆಸಿಕೊಳ್ಳುವಂತೆ ಹೈಕೋರ್ಟ್ ಸರಕಾರಕ್ಕೆ ಆದೇಶಿಸಿದೆ.

ಕರ್ನಾಟಕ ನಾಗರಿಕ ಸೇವಾ(ವೈದ್ಯಕೀಯ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿ ವರ್ಗಾವಣೆ ನಿಯಂತ್ರಣ ತಿದ್ದುಪಡಿ ಕಾಯ್ದೆ) 2011ರ ಅನ್ವಯ ವರ್ಗಾವಣೆ ನಡೆಯದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.

ಕಾಯ್ದೆಯ ಅನ್ವಯ ಕೌನ್ಸೆಲಿಂಗ್ ನಡೆಸುವ ಮೂಲಕ ವರ್ಗಾವಣೆ ಮಾಡುವಂತೆ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ. ಅಲ್ಲದೇ, ಈ ವರ್ಗಾವಣೆ ಪ್ರಕ್ರಿಯೆಯನ್ನು ಜುಲೈ 15ರ ಒಳಗೆ ಪೂರ್ಣಗೊಳಿಸುವಂತೆ ನಿರ್ದೇಶ ನೀಡಿದ್ದಾರೆ.

ಒಂದು ವೇಳೆ ಕಾಯ್ದೆಯ ಅನ್ವಯ ವರ್ಗಾವಣೆ ನಡೆಯದೇ ಹೋದಲ್ಲಿ, ಅಂತಹ ಸಿಬ್ಬಂದಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ನ್ಯಾಯಾಲಯದ ಗಮನ ಸೆಳೆಯಬಹುದು ಎಂದೂ ಪೀಠ ತನ್ನ ತೀರ್ಪಿನಲ್ಲಿ ತಿಳಿಸಿದೆ.
ಇವನ್ನೂ ಓದಿ