ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಾಬಾ ಬಂಧನ; ರಾಜ್ಯಾದ್ಯಂತ ಆಕ್ರೋಶ, ಸತ್ಯಾಗ್ರಹ (Ramdev | Hunger strike | Arrest | Bangalore | Congress)
ಕಪ್ಪು ಹಣ ವಾಪಸಾತಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಯೋಗ ಗುರು ಬಾಬಾ ರಾಮದೇವ್ ಅವರನ್ನು ಬಂಧಿಸಿ, ಮಕ್ಕಳು-ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಬಾಬಾ ಬೆಂಬಲಿಗರು ಹೋರಾಟ ನಡೆಸಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್, ಬೀದರ್, ತುಮಕೂರು, ರಾಯಚೂರು, ಚಿತ್ರದುರ್ಗ, ಬೆಳಗಾವಿ, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಬಾಬಾ ಬಂಧನಕ್ಕೆ ಕೇಂದ್ರ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಬಾಬಾ ಬೆಂಬಲಿಗರು ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ.

ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಶಾಂತಿಯುತವಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬಾಬಾ ಅವರನ್ನು ಬಂಧಿಸಿ, ಮಕ್ಕಳು-ಮಹಿಳೆಯರನ್ನು ಪೊಲೀಸರು ಥಳಿಸಿರುವ ಘಟನೆಗೆ ಬಾಬಾ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿ, ಕೇಂದ್ರ ಸರಕಾರದ ಧೋರಣೆ ವಿರುದ್ಧ ಘೋಷಣೆ ಕೂಗಿದರು. ನಾವು ಯಾವುದೇ ಕಾರಣಕ್ಕೂ ಸತ್ಯಾಗ್ರಹ ಕೈಬಿಡುವುದಿಲ್ಲ. ಬಾಬಾ ಹೋರಾಟಕ್ಕೆ ತಮ್ಮ ಬೆಂಬಲ ಮುಂದುವರಿಯಲಿದೆ ಎಂದು ಈ ಸಂದರ್ಭದಲ್ಲಿ ಬಾಬಾ ಬೆಂಬಲಿಗರು ತಿಳಿಸಿದ್ದಾರೆ.

ಕಪ್ಪು ಹಣ ವಾಪಸಾತಿ ಮತ್ತು ಭ್ರಷ್ಟಾಚಾರದ ವಿರುದ್ಧ ಮಾತನಾಡಿರುವುದು ತಪ್ಪೇ? ಬಾಬಾ ತಮ್ಮ ಸ್ವಂತಕ್ಕೆ ಏನನ್ನೂ ಕೇಳಿಲ್ಲ. ಅವರೇನು ಅಪರಾಧಿಯೇ? ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿ ಸತ್ಯಾಗ್ರಹ ಹತ್ತಿಕ್ಕುವ ಕೆಲಸಕ್ಕೆ ಕೇಂದ್ರ ಸರಕಾರ ಮುಂದಾಗಿದೆ ಎಂದು ಕಿಡಿಕಾರಿರುವ ಸತ್ಯಾಗ್ರಹಿಗಳು, ಕೇಂದ್ರ ಸರಕಾರ ಇದಕ್ಕೆ ತಕ್ಕ ತಲೆದಂಡವಾಗಲಿದೆ ಎಂದು ಎಚ್ಚರಿಸಿದ್ದಾರೆ.
ಇವನ್ನೂ ಓದಿ