ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯದ ದೊಡ್ಡ ಭ್ರಷ್ಟರೆಂದ್ರೆ ಗೌಡ-ಮಕ್ಕಳು: ಪುಟ್ಟಸ್ವಾಮಿ (Deve gowda | Kumaraswamy | JDS | BJP | Yeddyurappa | Puttamaswamy)
ಭ್ರಷ್ಟ ರಾಜಕಾರಣಿಗಳೆಂದರೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದು ಕಿಡಿಕಾರಿರುವ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಬಿ.ಜೆ.ಪುಟ್ಟಸ್ವಾಮಿ ಅವರು ರಾಜ್ಯದಲ್ಲಿ ಅತಿ ಹೆಚ್ಚು ಆಸ್ತಿ ಹೊಂದಿರುವುದು ಗೌಡರ ಕುಟುಂಬ ಎಂದು ಆರೋಪಿಸಿದ್ದಾರೆ.

ಪ್ರೆಸ್‌ಕ್ಲಬ್ ಸಭಾಂಗಣದಲ್ಲಿ ಶನಿವಾರ ಮಾಜಿ ಪ್ರಧಾನಿ ದೇವೇಗೌಡ ಮತ್ತು ಅವರ ಕುಟುಂಬ ಹೊಂದಿರುವ ಆಸ್ತಿ ವಿವರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಹಾಸನ ಹಾಗೂ ರಾಮನಗರ ಜಿಲ್ಲೆಗಳಲ್ಲಿ 126 ಬಡವರಿಗೆ ಸೇರಬೇಕಾಗಿದ್ದ ಮೀಸಲಾತಿ ಜಮೀನನ್ನು ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ದೇವೇಗೌಡ ಮತ್ತು ಕುಟುಂಬ ಸಿಐಟಿವಿಯಿಂದ 48 ಸೈಟ್ ಪಡೆದಿದ್ದು, ನಗರದ ಸುತ್ತಮುತ್ತ ಹಾಗೂ ಮೈಸೂರಿನಲ್ಲಿ 240 ವಾಣಿಜ್ಯ ಸಂಕೀರ್ಣದ ಒಟ್ಟು ಆಸ್ತಿ 6,71,000 ಚದರ ಅಡಿ ಗಳಿಸಿದ್ದಾರೆ. ಬಿಜೆಪಿ ಭ್ರಷ್ಟಾಚಾರ ಎಸಗುತ್ತಿದೆ ಎನ್ನುವ ಗೌಡರು ಮತ್ತು ಕುಮಾರಸ್ವಾಮಿ ಅವರು ತಾವು ಸಂಪಾದಿಸಿರುವ ಆಸ್ತಿಗಳ ಬಗ್ಗೆ ಮೊದಲು ಉತ್ತರಿಸಲಿ ಎಂದು ಸವಾಲು ಹಾಕಿದರು.

ಅಲ್ಲದೇ ಗೌಡರ ಮಕ್ಕಳು, ಮೊಮ್ಮಕ್ಕಳ ಹೆಸರಿನಲ್ಲಿ 24 ವಾಣಿಜ್ಯ ಸಂಸ್ಥೆಗಳು ಹಾಗೂ ಇತ್ತೀಚೆಗೆ ಕುಮಾರಸ್ವಾಮಿ ಕುಟುಂಬಕ್ಕೆ 157 ಕೋಟಿ ಹಣ ಬಂದಿರುವ ಬಗ್ಗೆ ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು.

ಸರಕಾರದ ವಿರುದ್ಧ ಭ್ರಷ್ಟಾಚಾರದ ಆಂದೋಲನ ಆರಂಭಿಸುವ ಮೊದಲು ತಾವು ಬಿಡುಗಡೆ ಮಾಡಿರುವ ಆಸ್ತಿ ದಾಖಲೆಗಳ ಬಗ್ಗೆ ಸ್ಪಷ್ಟನೆ ನೀಡಲಿ. ಅಗತ್ಯವಿದ್ದರೆ ಸಾರ್ವಜನಿಕವಾಗಿ ಚರ್ಚೆಗೆ ಬರಲು ಸಿದ್ದ ಎಂದು ಪುಟ್ಟಸ್ವಾಮಿ ಈ ಸಂದರ್ಭದಲ್ಲಿ ಹೇಳಿದರು.
ಇವನ್ನೂ ಓದಿ