ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಯಾವುದೇ ರೀತಿಯ ಬಹಿರಂಗ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಹೇಳಿಕೆಗಳಿಂದಾಗಿ ಪಕ್ಷದಲ್ಲಿ ಒಂದು ರೀತಿಯ ಅಸಮಧಾನ ಕಾಣುವ ಸಾಧ್ಯತೆಗಳಿರುವುದರಿಂದ ಬಹಿರಂಗ ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಯಾವಾಗ ನಡೆಯಲಿದೆ. ಸಂಪುಟದಲ್ಲಿ ಸೇರ್ಪಡೆಗೊಳ್ಳುವ ಶಾಸಕರ ಹೆಸರುಗಳು ಎನ್ನುವ ರಹಸ್ಯ ರಹಸ್ಯವಾಗಿ ಉಳಿದುಕೊಂಡಿದೆ.
ಸದ್ಯಕ್ಕೆ ಸಚಿವ ಸಂಪುಟದಲ್ಲಿ ಏಳು ಸ್ಥಾನಗಳು ಖಾಲಿ ಉಳಿದಿದ್ದು, ಹಲವಾರು ಶಾಸಕರು ಆಕಾಂಕ್ಷಿಗಳಾಗಿದ್ದಾರೆ. ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತದೆ ಎಂದರು.
ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ಸಿ.ಪಿ.ಯೋಗೇಶ್ವರ್ ಅವರನ್ನು ಗೆಲ್ಲಿಸಿದಲ್ಲಿ ಮಂತ್ರಿ ಮಾಡುವುದಾಗಿ ಯಡಿಯೂರಪ್ಪ ಬಹಿರಂಗ ಘೋಷಣೆ ಮಾಡಿದ್ದರು. ಆದರೆ, ಇದೀಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಘೋಷಿಸಿರುವುದು ಸಚಿವ ಸ್ಥಾನ ಬಯಸುವವರಿಗೆ ನುಂಗಲಾರದ ತುತ್ತಾಗಿದೆ.