ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಯಾವುದೇ ದಂಡಿಗೆ, ದಾಳಿಗೆ ಹೆದರಲ್ಲ: ರೇಣುಕಾಚಾರ್ಯ (BJP | Yeddyurappa | JDS | Kumaraswamy | Renukacharya | Deve gowda)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಂಡಿಗೆ ಹೆದರಿಲ್ಲ, ದಾಳಿಗೆ ಹೆದರಿಲ್ಲ, ಕುಮಾರಸ್ವಾಮಿ ಜಾಗಟೆಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಅಬಕಾರಿ ಸಚಿವ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಹಾಗೂ ರಾಜ್ಯ ಸರಕಾರದ ಸಚಿವರುಗಳ ವಿರುದ್ಧ ವಿರೋಧ ಪಕ್ಷಗಳ ಮುಖಂಡರು ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್‌ನ ಹಳ್ಳಿ ನಡಿಗೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಸರಕಾರದ ಸಚಿವರಿಗೆ ಕೈಕೋಳ ಹಾಕಿಸುವುದಾಗಿ ಹೇಳಿದ್ದಾರೆ. ಈ ಹಿಂದೆ ಅವರು ಜೆಡಿಎಸ್‌ನಲ್ಲಿದ್ದಾಗ 2004ರಲ್ಲಿ ಕಾಂಗ್ರೆಸ್ ಪಕ್ಷದವರನ್ನು ಜೈಲಿಗೆ ಕಳುಹಿಸುವುದಾಗಿ ಹೇಳಿದ್ದರು. ಈಗ ಅದೇ ಪಕ್ಷಕ್ಕೆ ಅವರು ಸೇರಿದ್ದಾರೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಸರಕಾರದ ಅಭಿವೃದ್ಧಿ ಸಹಿಸದೆ ವಿರೋಧ ಪಕ್ಷದ ನಾಯಕರು ಮನಬಂದಂತೆ ಆರೋಪ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಜನ ಈಗಾಗಲೇ ಉಪ ಚುನಾವಣೆಯಲ್ಲಿ ಉತ್ತರ ನೀಡಿದ್ದಾರೆ ಎಂದರು.
ಇವನ್ನೂ ಓದಿ