ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜನರ ಬಳಿಗೆ 'ಕೈ' ನಡಿಗೆ ಬಿಜೆಪಿಗೆ ಲಾಭ (Congress | campaign | lesson for us | BJP)
ಕಾಂಗ್ರೆಸ್‌ ಪಕ್ಷವು ರಾಜ್ಯಾದ್ಯಂತ 60 ದಿನಗಳ ಕಾಲ ಹಮ್ಮಿಕೊಂಡಿರುವ 'ಜನರ ಬಳಿಗೆ ಕಾಂಗ್ರೆಸ್‌ ನಡಿಗೆ' ಅಭಿಯಾನವನ್ನು ಸ್ವಾಗತಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್‌. ಈಶ್ವರಪ್ಪ, ಇದು ಆಡಳಿತ ಪಕ್ಷದ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಅಧಿಕಾರಕ್ಕೆ ಬಂದ ನಂತರ ಜನರನ್ನು ತಪ್ಪು ದಾರಿಗೆಳೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಕಾಂಗ್ರೆಸ್‌ ಪಕ್ಷವು ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಿದೆ ಎಂದು ಹೇಳಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ರಾಜಕೀಯ ಪ್ರತಿಸ್ಪರ್ಧಿಗಳನ್ನ ಟೀಕೆ ಮಾಡುವ ಸಂದರ್ಭದಲ್ಲಿ ಬಳಸಿರುವ ಪದಗಳನ್ನು ಗಮನಿಸಿದರೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎನ್ನಿಸುತ್ತದೆ ಎಂದು ಆಪಾದಿಸಿದ್ದಾರೆ.

ನಾವು ಜೈಲಿಗೆ ಹೋಗುವಂತಹ ಯಾವುದೇ ಅಪರಾಧಗಳನ್ನೂ ಮಾಡಿಲ್ಲ, ವಿಧಾನಸಭೆ ಅಧಿವೇಶನವನನ್ನು ಬಹಿಷ್ಕರಿಸಿದ ಪ್ರತಿಪಕ್ಷಗಳನ್ನು ಜನರು ತಿರಸ್ಕರಿಸಲಿದ್ದಾರೆ. ತಾವು ಮಾಡಿದ ಆರೋಪಕ್ಕೆ ಪ್ರತಿಪಕ್ಷಗಳು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಅವರು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಲು ಯಡಿಯೂರಪ್ಪ ನಿರಾಕರಿಸಿದರು. ಇಂತಹ ವರದಿಗಳು ಅರ್ಥಹೀನವಾಗಿದ್ದು, ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದರು.
ಇವನ್ನೂ ಓದಿ