ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ಆಂದೋಲನಕ್ಕೆ ದಿಲ್ಲಿ ನಾಯಕರ ದಂಡು: ಪರಮೇಶ್ವರ್ (''Congress Nadige, Janara Balige'' | Central leaders | Join campaign)
PR
ಕಾಂಗ್ರೆಸ್ ಪಕ್ಷ ಬೇರುಮಟ್ಟದಿಂದ ಪಕ್ಷವನ್ನು ಸಂಘಟಿಸಲು ಜೂನ್ 15 ರಿಂದ ಹಮ್ಮಿಕೊಳ್ಳಲಾದ 60 ದಿನಗಳ 'ಕಾಂಗ್ರೆಸ್ ನಡಿಗೆ ಜನರ ಬಳಿಗೆ' ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರು ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜುಲೈ 7 ರಿಂದ ಬೀದರ್, ಗುಲ್ಬರ್ಗಾ, ಬಿಜಾಪುರ, ಬಾಗಲಕೋಟೆ, ಗದಗ್, ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳಲ್ಲಿ ನಡೆಯಲಿರುವ 'ಕಾಂಗ್ರೆಸ್ ನಡಿಗೆ ಜನರ ಬಳಿಗೆ' ಆಂದೋಲನದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಉಸ್ತುವಾರಿಯ ಹೊಣೆಯನ್ನು ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಮತ್ತು ಎಐಸಿಸಿ ಕಾರ್ಯದರ್ಶಿ ಸಂಜಯ್ ನಿರುಪಮ್ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಉತ್ತರ ಕರ್ನಾಟಕದಲ್ಲಿ ನಡೆಯಲಿರುವ ಅಂದೋಲನದಲ್ಲಿ ತಾವು ಭಾಗವಹಿಸಲಿದ್ದು, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಮತ್ತು ಹಿರಿಯ ನಾಯಕಿ ಮೋಟಮ್ಮ ಕೂಡಾ ಭಾಗವಹಿಸಲಿದ್ದಾರೆ. ಜುಲೈ 9 ರಂದು ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗಳ ಸಿದ್ಧತೆ ಮತ್ತು ಬಿಜೆಪಿ ಸರಕಾರದ ವಿರುದ್ಧದ ಹೋರಾಟಗಳ ತಂತ್ರಗಳನ್ನು ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

ಡೀಸೆಲ್ ಸೀಮೆಎಣ್ಣೆ ಮತ್ತು ಎಲ್‌ಪಿಜಿ ದರಗಳ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದು, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸರಕಾರಗಳಂತೆ ಸೆಸ್ ತೆರಿಗೆಯನ್ನು ಕಡಿತಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜಿ. ಪರಮೇಶ್ವರ್ ಒತ್ತಾಯಿಸಿದ್ದಾರೆ.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ