ತಮ್ಮ ಕುಟುಂಬದ ವಿರುದ್ಧ ಬಿಜೆಪಿ ಮಾಡಿರುವ ಆರೋಪಗಗಳನ್ನು ಸರಕಾರ ತನಿಖೆಗೆ ಆದೇಶ ನೀಡದಿದ್ದರೆ ತಾನು ವಿಧಾನಸೌಧದ ಮುಂದೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಿಳಿಸಿದ್ದ ಕುಮಾರಸ್ವಾಮಿಗೆ ಉತ್ತರವಾಗಿ ಸಿಎಂ ಈ ರೀತಿಯಾಗಿ ನುಡಿದಿದ್ದಾರೆ.
ವಿಧಾನಸೌಧದ ಮುಂದೆ ಯಾರಿಗೂ ಪ್ರತಿಭಟನೆ ಅಥವಾ ಧರಣಿ ನಡೆಸಲು ಅವಕಾಶ ನೀಡುವುದಿಲ್ಲ. ಬೇಕಿದ್ರೆ ಕುಮಾರಸ್ವಾಮಿ ಫ್ರೀಡಂಪಾರ್ಕ್ ಬಳಿ ಧರಣಿ ಮಾಡಲಿ. ವಿಧಾನಸೌಧದ ಬಳಿ ಬಿಡೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಕ್ಕುಗಳನ್ನು ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಲು ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಕುಮಾರಸ್ವಾಮಿ ಬೇಡಿಕೆ ಕಾನೂನಿನ ಚೌಕಟ್ಟಿನಲ್ಲಿದ್ದರೆ ಸರಕಾರ ಪರಿಶೀಲನೆ ನಡೆಸಲಿದೆ ಎಂದಿದ್ದಾರೆ.
ಧರಣಿ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸುತ್ತೀರಾ ಎಂಬುದಕ್ಕೆ, ಅಂತಹ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅವರ ಪ್ರತಿನಿಧಿಗಳು ಮನವಿ ಸಲ್ಲಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅವರ ಕಡೆಯವರು ಬಂದರೆ ಚರ್ಚಿಸುವೆ. ಆದರೆ ಯಾವುದೇ ರೀತಿಯಲ್ಲಿ ಕಾನೂನು ಉಲ್ಲಂಘಿನೆಯಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಪರೋಕ್ಷ ಎಚ್ಚರಿಕೆ ನೀಡಿದರು.