ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕುಮಾರಸ್ವಾಮಿ ನಿರಶನ ಅನಗತ್ಯ: ರಾಜ್ಯಪಾಲ (H R Bhardwaj | H D Kumaraswamy | Yeddyurappa | JD(S) leader)
PR
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸಬೇಕೇ ಹೊರತು ಅನಗತ್ಯ ವಿಷಯಗಳಿಗೆ ಉಪವಾಸ ಸತ್ಯಾಗ್ರಹ ಮಾಡುವುದು ಸೂಕ್ತವಲ್ಲ ಎಂದು ರಾಜ್ಯಪಾಲ ಎಚ್‌.ಆರ್.ಭಾರದ್ವಾಜ್ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಜೆಡಿಎಸ್ ನಾಯಕರ ಆಕ್ರೋಶ ಸಲ್ಲದು. ಯಾವುದೇ ಸಮಸ್ಯೆಗಳಿದ್ದಲ್ಲಿ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ರಾಜಕಾರಣಿಗಳು ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

ಜನತೆ ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಶಾಸಕರನ್ನು ಆಯ್ಕೆ ಮಾಡಿ ವಿಧಾನಸಭೆಗೆ ಕಳುಹಿಸುತ್ತಾರೆ. ಶಾಸಕರು, ಜನತೆ ತಮಗೆ ನೀಡಿದ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು. ಇಂತಹ ನಿರಶನಗಳಿಂದ ಜನತೆಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬನ್ನೇರುಘಟ್ಟ ಬಯಾಲೋಜಿಕಲ್ ಪಾರ್ಕ್‌ಗೆ ಭೇಟಿ ನೀಡಿ ಸಸಿಯನ್ನು ನೆಡುವುದರೊಂದಿಗೆ ಆನೆಯನ್ನು ದತ್ತು ಸ್ವೀಕರಿಸಿದರು.

ದೇಶದ ಉತ್ತಮ ರಾಷ್ಟ್ರೀಯ ಪಾರ್ಕ್‌ಗಳಲ್ಲಿ ಬನ್ನೇರುಘಟ್ಟ ಕೂಡಾ ಸ್ಥಾನಪಡೆದಿದೆ. ಆದರೆ, ಮತ್ತಷ್ಟು ಅಭಿವೃದ್ಧಿಯಾಗಬೇಕಿದೆ. ಪರಿಸರವನ್ನು ಉಳಿಸಲು ಅರಣ್ಯಾಧಿಕಾರಿಗಳು ಶ್ರಮಿಸಬೇಕಾಗಿದೆ ಎಂದು ರಾಜ್ಯಪಾಲ ಎಚ್‌.ಆರ್.ಭಾರದ್ವಾಜ್ ಹೇಳಿದ್ದಾರೆ.
ಇವನ್ನೂ ಓದಿ