ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗಂಡಂದಿರನ್ನ ನಿಯಂತ್ರಣದಲ್ಲಿಡಿ: ಸಚಿವ ಶೆಟ್ಟರ್ ತಾಕೀತು (Jagadish shettar | Zill panchayath | Meeting | Davana gere | Yeddyurappa)
PR
ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿ ಸಭೆಗಳಿಗೆ ನಿಮ್ಮ ಗಂಡಂದಿರನ್ನು ಕರೆ ತರಬೇಡಿ. ಗಂಡಂದಿರು ನಿಮ್ಮ ನಿಯಂತ್ರಣದಲ್ಲಿರಲಿ....ಇದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ಅವರು ಮಹಿಳಾ ಸದಸ್ಯರಿಗೆ ಹೇಳಿದ ಕಿವಿಮಾತು.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮಂಗಳವಾರ ದಾವಣಗೆರೆ ಜಿಲ್ಲಾ ಪಂಚಾಯ್ತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಿಳಾ ಸದಸ್ಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಸ್ವತಂತ್ರ ನಿರ್ಧಾರ ಕೈಗೊಳ್ಳುವ ಮೂಲಕ ತಮ್ಮ ಅಧಿಕಾರವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆದರೆ ಸಭೆಗಳಿಗೆ ಗಂಡಂದಿರನ್ನು ಕರೆತರುವುದು ಕಾನೂನು ಬಾಹಿರವಾದ ವಿಚಾರ. ಯಾವುದೇ ಕಾರಣಕ್ಕೂ ಗಂಡಂದಿರನ್ನು ಕರೆತಂದು ಅವರು ನಿಮ್ಮ ಹೆಸರಿನಲ್ಲಿ ಅಧಿಕಾರ ಚಲಾಯಿಸುವುದು ಸರಿಯಲ್ಲ. ಹಾಗಾಗಿ ನಿಮ್ಮ ಗಂಡಂದಿರನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಎಂದು ತಾಕೀತು ಮಾಡಿದರು.

ಪ್ರತಿ ಕ್ಷೇತ್ರದಲ್ಲಿಯೂ ಮಹಿಳೆಯರಿಗೆ ಎಲ್ಲಾ ರೀತಿಯ ಅಧಿಕಾರ ಕೊಟ್ಟಿದ್ದೇವೆ. ಪ್ರತಿ ಹಂತದಲ್ಲಿಯೂ ನೀವು ಸೂಕ್ತ ನಿರ್ಧಾರ ಕೈಗೊಳ್ಳಲು ಅರ್ಹರು. ಯಾವುದೇ ಕಾರಣಕ್ಕೂ ಪತಿಯನ್ನು ಮುಂಚೂಣಿಗೆ ತರುವ ಪ್ರಯತ್ನ ಮಾಡಬಾರದು ಎಂದು ಈ ಸಂದರ್ಭದಲ್ಲಿ ಹೇಳಿದರು.
ಇವನ್ನೂ ಓದಿ