ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲೋಕಾಯುಕ್ತರ ಭೇಟಿ ಸತ್ಯ, ಒತ್ತಡ ಹೇರಿಲ್ಲ: ಧನಂಜಯ್ (Lokayuktha | Dhananjay kumar | Illigal mining | Santhosh hegde | Yeddyurappa)
PR
'ನನ್ನ ವೈಯಕ್ತಿಕ ಕೆಲಸದ ವಿಚಾರಕ್ಕಾಗಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರನ್ನು ಭೇಟಿಯಾಗಿದ್ದು ಸತ್ಯ. ಆದರೆ ನಾನು ಅವರ ಮೇಲೆ ಅಕ್ರಮ ಗಣಿಗೆ ಸಂಬಂಧಿಸಿದ ವರದಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರು ಕೈಬಿಡಿ ಎಂದು ಒತ್ತಡ ಹೇರಿಲ್ಲ' ಎಂದು ಬಿಜೆಪಿ ಮುಖಂಡ ಧನಂಜಯ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಸಚಿವ ವಿ.ಎಸ್.ಆಚಾರ್ಯ, ಬಿಜೆಪಿ ಹಿರಿಯ ಮುಖಂಡ ಎ.ಜಿ.ಕೊಡ್ಗಿಯವರ ಜತೆಗೂಡಿ ನ್ಯಾ.ಸಂತೋಷ್ ಹೆಗ್ಡೆಯವರನ್ನು ಧನಂಜಯ್ ಕುಮಾರ್ ಭೇಟಿಯಾಗಿದ್ದ ವೇಳೆಯಲ್ಲಿ ಗಣಿ ವರದಿಯಲ್ಲಿ ಮುಖ್ಯಮಂತ್ರಿಗಳ ಹೆಸರನ್ನು ಕೈಬಿಡುವಂತೆ ಒತ್ತಡ ಹೇರಿರುವುದಾಗಿ ಸಂದರ್ಶನವೊಂದರಲ್ಲಿ ಸಂತೋಷ್ ಹೆಗ್ಡೆ ಬಹಿರಂಗಪಡಿಸಿರುವುದು ರಾಜ್ಯರಾಜಕಾರಣದಲ್ಲಿ ಮತ್ತೊಂದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಧನಂಜಯ್ ಕುಮಾರ್, ವಿ.ಎಸ್.ಆಚಾರ್ಯ ಲೋಕಾಯುಕ್ತರ ಮೇಲೆ ಒತ್ತಡ ಹೇರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಖಾರವಾಗಿ ಪ್ರತಿಕ್ರಿಯಿಸಿ, ಧನಂಜಯ್, ಆಚಾರ್ಯ ಅವರನ್ನು ಕೂಡಲೇ ವಜಾಗೊಳಿಸಬೇಕೆಂದು ಒತ್ತಾಯಿಸಿದ್ದವು.

ಏತನ್ಮಧ್ಯೆ ಲೋಕಾಯುಕ್ತರ ಮೇಲೆ ಒತ್ತಡ ಹೇರಿದ ವಿಚಾರ ಸಾಕಷ್ಟು ಬಿಸಿ,ಬಿಸಿ ಚರ್ಚೆಗೆ ಒಳಗಾಗುತ್ತಿರುವ ಸಂದರ್ಭದಲ್ಲಿ ಈ ಬಗ್ಗೆ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಧನಂಜಯ್ ಕುಮಾರ್, ನಾನು ಲೋಕಾಯುಕ್ತರ ಮೇಲೆ ಒತ್ತಡ ಹೇರಿಲ್ಲ. ಇದು ನನ್ನ ಮೇಲೆ ಗೂಬೆ ಕೂರಿಸುವ ಪ್ರತಿಪಕ್ಷಗಳ ಹುನ್ನಾರ ಎಂದು ಕಿಡಿಕಾರಿದರು.

ಲೋಕಾಯುಕ್ತರನ್ನು ಭೇಟಿಯಾಗಿದ್ದು ನಿಜ. ಲೋಕಾಯುಕ್ತರ ಮೇಲೆ ನನಗೆ ಅಪಾರ ಗೌರವವಿದೆ. ಹಾಗಂತ ಅವರ ಮೇಲೆ ಒತ್ತಡ ಹೇರುವ ಕೆಲಸಕ್ಕೆ ಕೈಹಾಕಿಲ್ಲ. ಈ ಕುರಿತು ನಾನು ಯಾವುದೇ ತನಿಖೆಗೂ ಸಿದ್ಧ. ನಾನು ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಳಲಿ ಎಂದು ಈ ಸಂದರ್ಭದಲ್ಲಿ ಹೇಳಿದರು.
ಇವನ್ನೂ ಓದಿ